BBMP
Loading ...

Greater Bengaluru News9: ನಿರಂತರ ಮಳೆ ಕೊರತೆ ಹಿನ್ನೆಲೆ ರಾಜ್ಯದಲ್ಲಿರುವ ಎಲ್ಲಾ ಸಚಿವಾಲಯದ ಕಚೇರಿಗಳಲ್ಲಿ ನೀರು ಹಾಗೂ ವಿದ್ಯುತ್‌ ಅನ್ನು ಮಿತವಾಗಿ ಬಳಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ (Chief Secretary) ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸೂಚನೆ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಆದೇಶ ಹೊರಡಿಸಿದೆ.

ಆದೇಶದಲ್ಲಿ ಏನಿದೆ?
ಪ್ರಸ್ತುತ ಸಂಭವಿಸುತ್ತಿರುವ ಎಲ್‌ನೊ ಹವಾಮಾನ ವೈಪರೀತ್ಯದ ಪರಿಣಾಮದಿಂದ ವಿಶ್ವದಾದ್ಯಂತ ಸಾಮಾನ್ಯ ಹವಾಮಾನ ಮಾದರಿಗಳನ್ನ ವ್ಯತ್ಯಯಗೊಳಿಸುತ್ತಿದ್ದು, ದೇಶದಲ್ಲಿ ಅತಿವೃಷ್ಟಿ, ಪ್ರವಾಹ ಮತ್ತು ಬರಗಾಲ ಮೊದಲಾದ ತೀವ್ರ ಹವಾಮಾನ ಪರಿಸ್ಥಿತಿಗಳಿಗೆ ಕಾರಣವಾಗಿದೆ. ಅಲ್ಲದೇ ದೇಶದಲ್ಲಿ ಮಳೆಯ ಕೊರತೆಯುಂಟಾಗುತ್ತಿದೆ. ಇದರಿಂದ, ನಮ್ಮ ರೈತರ ಕೃಷಿ ಉತ್ಪಾದನೆ ಮೇಲೆ ಪರಿಣಾಮ ಬೀರುತ್ತಿದೆ. ಆದ್ದರಿಂದ, ನಾವು ನಮ್ಮಲ್ಲಿರುವ ಅತ್ಯಮೂಲ್ಯ ನೈಸರ್ಗಿಕ ಸಂಪನ್ಮೂಲ ಮತ್ತು ಜೀವಜಲವಾದ ನೀರನ್ನ ಉಪಯೋಗಿಸುವಾಗ ಆದಷ್ಟು ಎಚ್ಚರಿಕೆ ವಹಿಸಬೇಕಾಗಿದೆ.

ಸಚಿವಾಲಯದಲ್ಲಿ ವಿದ್ಯುತ್‌ನ್ನು ಮಿತವಾಗಿ ಬಳಸುವ ಕುರಿತು ಆಗಾಗ್ಗೆ ಅನೇಕ ಸುತ್ತೋಲೆಗಳ ಮೂಲಕ ಹಲವಾರು ಬಾರಿ ಸೂಚನೆಗಳನ್ನು ನೀಡಲಾಗಿದೆ. ಆದರೂ, ಸಹ ಸಚಿವಾಲಯದ ಕಚೇರಿಗಳಲ್ಲಿ ವಿದ್ಯುತ್ತಿನ ಬಳಕೆಯಲ್ಲಿ ನಿಯಂತ್ರಣವಾಗದಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ವಿದ್ಯುತ್ ನವೀಕರಿಸಲಾಗದಂತಹ ಅತ್ಯಂತ ಮಹತ್ವದ ನೈಸರ್ಗಿಕ ಸಂಪನ್ಮೂಲವಾಗಿರುವುದರಿಂದ ವಿದ್ಯುತ್‌ನ್ನು ಸ್ವೇಚ್ಛಾ ಮನೋಭಾವದಿಂದ ಬಳಸುವುದು ಸರಿಯಾದ ಕ್ರಮವಾಗಿರುವುದಿಲ್ಲ. ಇಂತಹ ಅಮೂಲ್ಯವಾದ ವಿದ್ಯುತ್‌ನ್ನು ವ್ಯಯ ಮಾಡದೇ ಮಿತವಾಗಿ ಬಳಸುವುದು ಮತ್ತು ಅನಗತ್ಯ ಬಳಕೆಯನ್ನು ತಡೆಗಟ್ಟುವುದರ ಮೂಲಕ ವಿದ್ಯುತ್ ಉಳಿತಾಯ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಆದ್ದರಿಂದ ಈ ಕೆಳಕಂಡ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಸೂಚಿಸಿದೆ.

Leave a Reply

Your email address will not be published. Required fields are marked *