BBMP
Loading ...

Junk Food

Greater Bengaluru News9 : ಮಕ್ಕಳಲ್ಲಿ ಹೆಚ್ಚುತ್ತಿರುವ ಬೊಜ್ಜು, ಮಧುಮೇಹ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಜಂಕ್ ಫುಡ್‌ಗಳ ಮಾರಾಟ ಹಾಗೂ ಬಳಕೆಗೆ ಕಡಿವಾಣ ಹಾಕಲು ಆಹಾರ ಸುರಕ್ಷತಾ ಇಲಾಖೆ ಮುಂದಾಗಿದೆ.

ಶಾಲಾ ಮಕ್ಕಳು ಹೆಚ್ಚು ಸೇವಿಸುವ ಅನಾರೋಗ್ಯಕರ ಆಹಾರಗಳ ಬಗ್ಗೆ ತಜ್ಞ ನ್ಯೂಟ್ರಿಷನ್ ವೈದ್ಯರ ಸಲಹೆ ಪಡೆದು ಹೊಸ ಮಾರ್ಗಸೂಚಿ ಸಿದ್ಧಪಡಿಸಲಾಗುತ್ತಿದೆ. ಶಾಲೆ, ಕಾಲೇಜು ಹಾಗೂ ವಸತಿ ನಿಲಯಗಳ ಕ್ಯಾಂಟೀನ್‌ಗಳು ಮತ್ತು ಸುತ್ತಮುತ್ತಲಿನ ಅಂಗಡಿಗಳಲ್ಲಿ ಮಾರಾಟವಾಗುತ್ತಿರುವ ಜಂಕ್ ಫುಡ್‌ಗಳ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲು ಇಲಾಖೆ ನಿರ್ಧರಿಸಿದೆ.

ಆಲೂಗಡ್ಡೆ ಚಿಪ್ಸ್, ಫ್ರೆಂಚ್ ಫ್ರೈಸ್, ಬರ್ಗರ್, ಪಿಜ್ಜಾ, ಹಾಟ್‌ಡಾಗ್, ಕೋಲ್ಡ್‌ಡ್ರಿಂಕ್ಸ್, ಎನರ್ಜಿ ಡ್ರಿಂಕ್ಸ್, ಚಾಕೊಲೇಟ್, ಐಸ್‌ಕ್ರೀಮ್, ಪ್ಯಾಕ್ ಮಾಡಿದ ಬಿಸ್ಕತ್‌ಗಳು, ಫ್ರೈಡ್ ಸ್ನ್ಯಾಕ್ಸ್, ಇನ್‌ಸ್ಟಂಟ್ ನೂಡಲ್ಸ್ ಸೇರಿದಂತೆ ಹಲವು ಆಹಾರಗಳನ್ನು ಜಂಕ್ ಫುಡ್ ಪಟ್ಟಿಗೆ ಸೇರಿಸಲಾಗಿದೆ.

ಮಕ್ಕಳಲ್ಲಿ ಹೆಚ್ಚುತ್ತಿರುವ ಸ್ಥೂಲಕಾಯತೆ, ಫ್ಯಾಟಿ ಲಿವರ್ ಹಾಗೂ ಟೈಪ್-2 ಡಯಾಬಿಟಿಸ್‌ನಂತಹ ಸಮಸ್ಯೆಗಳನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ. ತಜ್ಞರ ಪ್ರಕಾರ, ಬಾಲ್ಯದಲ್ಲೇ ಕಾಣಿಸಿಕೊಳ್ಳುವ ಬೊಜ್ಜು ಮುಂದಿನ ದಿನಗಳಲ್ಲಿ ಹೃದಯ ಕಾಯಿಲೆ, ಅಧಿಕ ರಕ್ತದೊತ್ತಡ, ಕೊಲೆಸ್ಟ್ರಾಲ್ ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.

ಮಕ್ಕಳಿಗೆ ಕರಿದ, ಸಂಸ್ಕರಿತ ಹಾಗೂ ಹೆಚ್ಚು ಸಕ್ಕರೆ ಹೊಂದಿರುವ ಆಹಾರಗಳ ಬದಲು ಪೌಷ್ಟಿಕ ಆಹಾರ ನೀಡುವಂತೆ ಪೋಷಕರಿಗೂ ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ.

Leave a Reply

Your email address will not be published. Required fields are marked *