BBMP
Loading ...

Footpath

Greater Bengaluru News9 : ಪಾದಾಚಾರಿ ಮಾರ್ಗದಲ್ಲಿ ಮೋಟಾರು ವಾಹನ ಚಲಾಯಿಸುವವರಿಗೆ ವಿಧಿಸುತ್ತಿದ್ದ ದಂಡದ ಮೊತ್ತವನ್ನು 5,000 ರೂ.ಗಳಿಗೆ ಹೆಚ್ಚಿಸುವಂತೆ ಒತ್ತಾಯಿಸಿ ಸಚಿವ ಕೃಷ್ಣ ಬೈರೇಗೌಡ ಅವರು ಸಾರಿಗೆ ಸಚಿವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಬುಧವಾರ ಬೆಂಗಳೂರು ನಗರ ಟ್ರಾಫಿಕ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ಸಾರ್ವಜನಿಕರ ನಡೆಯುವ ಹಕ್ಕನ್ನ ಖಚಿತಪಡಿಸುವ ಸಲುವಾಗಿ ಸುಪ್ರೀಂ ಕೋರ್ಟ್ ಸೂಚನೆಯ ಮೇರೆಗೆ ನಗರದಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ಐದೂ ಪಾಲಿಕೆಯ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕೆಲಸಕ್ಕೆ ಸಾರ್ವಜನಿಕರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆದರೆ, ಹೀಗೆ ಬೀದಿಬದಿ ವ್ಯಾಪಾರಿಗಳಿಂದ ತೆರವಾದ ಜಾಗದಲ್ಲಿ ಯಾವುದೇ ರೀತಿಯ ಮೋಟಾರು ವಾಹನಗಳನ್ನ ಚಲಾಯಿಸುವುದು ಸರಿಯಲ್ಲ. ಇಂತಹ ಕೃತ್ಯಗಳನ್ನ ಸಹಿಸಿಕೊಳ್ಳಲೂ ಸಾಧ್ಯವಿಲ್ಲ ಎಂದು ಬೇಸರ ಹೊರಹಾಕಿದರು.

Leave a Reply

Your email address will not be published. Required fields are marked *