Greater Bengaluru News9 : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಇದಕ್ಕೆ ಮೂರು ಸೂಕ್ತ ಕಾರಣಗಳನ್ನು ಅವರು ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಶನಿವಾರ ಆಯೋಜಿಸಿದ್ದ ಖಾಸಗಿ ಸಮಾರಂಭವೊಂದರಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯನರು ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ್ದರು. ಭಾನುವಾರ ಈ ಬಗ್ಗೆ ಟ್ವೀಟ್ ಮಾಡಿ ತಮ್ಮ ನಿಲುವನ್ನು ಮತ್ತೊಮ್ಮೆ ತಿಳಿಸಿದ್ದಾರೆ.
ಸಿದ್ದರಾಮಯ್ಯ ಕೊಟ್ಟ 3 ಕಾರಣಗಳೇನು?
- ರಾಜಕೀಯ ಕ್ಷೇತ್ರವು ಇಂದು ಕಲುಷಿತಗೊಂಡಿದೆ, ಪ್ರಾಮಾಣಿಕ ರಾಜಕಾರಣಕ್ಕೆ ಉಳಿಗಾಲವಿಲ್ಲ.
- ಈಗಿನಂತೆ ಮುಂದೆ ಆರೋಗ್ಯವೂ ಸದೃಢವಾಗಿ ಇರುವುದಿಲ್ಲ.
- ವಯಸ್ಸಾಗಿದ್ದು ಹಿಂದಿನಂತೆ ಉತ್ಸಾಹದಿಂದ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ.
ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ವರುಣ ಕ್ಷೇತ್ರದ ಜನರು ಒತ್ತಾಯಿಸುತ್ತಿದ್ದಾರೆ. ಆದರೆ ನಾನು ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಅಂದುಕೊಂಡಿದ್ದೇನೆ. ಈ ಹಿಂದೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದಾಗ ಕ್ಷೇತ್ರದ ಜನರೇ ನಮಗೆ ದುಡ್ಡುಕೊಟ್ಟು ಗೆಲ್ಲಿಸಿಕೊಂಡು ಬರುತ್ತಿದ್ದರು. ಆದರೆ, ಇಂದು ಅಂತಹ ಪರಿಸ್ಥಿತಿ ಇಲ್ಲ. ರಾಜಕೀಯ ಕ್ಷೇತ್ರ ಇಂದು ಕಲುಷಿತಗೊಂಡಿದೆ. ಪ್ರಾಮಾಣಿಕ ರಾಜಕಾರಣಕ್ಕೆ ಉಳಿಗಾಲ್ಲವಿಲ್ಲದಂತಾಗಿದೆ. 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಜತೆಗೆ ಮುಂದಿನ ಚುನಾವಣೆಗಳಲ್ಲಿ ನಾನು ಸ್ಪರ್ಧಿಸುವುದಿಲ್ಲ ಎನ್ನುವ ನಿರ್ಧಾರಕ್ಕೆ ಬಂದಿದ್ದೇನೆ. ಆದರೆ, ಸಕ್ರಿಯ ರಾಜಕಾರಣದಲ್ಲಿದ್ದು, ಜನರ ಕಷ್ಟ, ಸುಖಗಳಿಗೆ ಧ್ವನಿಯಾಗಿ ನಿಲ್ಲುತ್ತೇನೆ ಎಂದಿದ್ದಾರೆ.
ಈಗ ನನಗೆ 79 ವರ್ಷ. ನಮ್ಮ ಸರ್ಕಾರದ ಅವಧಿ ಇನ್ನು ಒಂದೂವರೆ ವರ್ಷ ಇದೆ. ಆಗ ನನಗೆ 81-82 ವರ್ಷವಾಗಿರುತ್ತದೆ. ಈಗಿನಂತೆ ಆರೋಗ್ಯವೂ ಸದೃಢವಾಗಿ ಇರುವುದಿಲ್ಲ. ಹಿಂದಿನಂತೆ ಉತ್ಸಾಹದಿಂದ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ. ಅಲ್ಲದೆ, 2028ರ ವೇಳೆಗೆ ನನಗೆ 82 ವರ್ಷವಾಗಿರುತ್ತದೆ. ಆಗ ನನ್ನ ರಾಜಕೀಯ ಜೀವನಕ್ಕೆ 50 ವರ್ಷಗಳು ಪೂರ್ಣಗೊಳ್ಳುತ್ತದೆ. 1978 ರಲ್ಲಿ ನಾನು ತಾಲೂಕು ಮಂಡಳಿ ಸದಸ್ಯನಾಗಿ ರಾಜಕೀಯ ಜೀವನ ಆರಂಭಿಸಿದ್ದೆ. ಸೋಲು – ಗೆಲುವು ಎಲ್ಲವನ್ನೂ ಕಂಡಿದ್ದೇನೆ. ಆದರೆ ನಂಬಿದ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದಿಲ್ಲ, ಆತ್ಮಸಾಕ್ಷಿಗೆ ದ್ರೋಹ ಬಗೆದಿಲ್ಲ ಎನ್ನುವ ಸಂತೃಪ್ತಿ ನನಗಿದೆ ಎಂದು ಹೇಳಿದ್ದಾರೆ.
ಐದು ದಶಕಗಳ ಕಾಲ ರಾಜ್ಯದ ಜನತೆ ನನ್ನನ್ನು ತಮ್ಮಲ್ಲೊಬ್ಬ ಎಂಬಂತೆ ಕಂಡಿದ್ದಾರೆ, ಪ್ರೀತಿಯಿಂದ ಸಲಹಿದ್ದಾರೆ. ಈ ಋಣಭಾರ ನನ್ನ ಮೇಲಿದೆ. ಹೀಗಾಗಿ ನನ್ನ ಮುಂದಿನ ಜೀವನ ಸಹ ಜನಸೇವೆಗೆ ಮುಡಿಪಾಗಿರುತ್ತದೆ.
ರಾಜಕೀಯ ಕ್ಷೇತ್ರ ಇಂದು ಕಲುಷಿತಗೊಂಡಿರುವುದರಿಂದ 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದರೆ, ಸಕ್ರಿಯ ರಾಜಕಾರಣದಲ್ಲಿದ್ದು, ಜನರ ಕಷ್ಟ, ಸುಖಗಳಿಗೆ ಧ್ವನಿಯಾಗಿ ನಿಲ್ಲುತ್ತೇನೆ.
— Siddaramaiah (@siddaramaiah) July 26, 2026
ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ವರುಣ ಕ್ಷೇತ್ರದ ಜನರು ಒತ್ತಾಯಿಸುತ್ತಿದ್ದಾರೆ. ಆದರೆ ನಾನು ಇನ್ನು ಮುಂದೆ ಯಾವುದೇ… pic.twitter.com/v0S4tCQ30o


