BBMP
Loading ...

Bc nagesh

Greater Bengaluru News9: ಮಾಜಿ ಶಿಕ್ಷಣ ಸಚಿವ ಹಾಗೂ ತಿಪಟೂರು ಕ್ಷೇತ್ರದ ಜನಪ್ರಿಯ ಶಾಸಕರಾಗಿದ್ದ ಬಿ.ಸಿ. ನಾಗೇಶ್ ವಿಧಿವಶರಾಗಿದ್ದಾರೆ. ತಮ್ಮ ಅಧಿಕಾರಾವಧಿಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ದಿಟ್ಟ ನಿರ್ಧಾರಗಳನ್ನು ಕೈಗೊಂಡಿದ್ದ ಅವರು, ಸರಳ ಸಜ್ಜನಿಕೆಯ ವ್ಯಕ್ತಿತ್ವದಿಂದ ಗುರುತಿಸಿಕೊಂಡಿದ್ದರು. ಅವರ ನಿಧನಕ್ಕೆ ರಾಜ್ಯ ರಾಜಕೀಯದಲ್ಲಿ ತೀವ್ರ ಶೋಕ ವ್ಯಕ್ತವಾಗಿದೆ.

ಕರ್ನಾಟಕ ರಾಜಕಾರಣದ ಹಿರಿಯ ನಾಯಕ, ಮಾಜಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಹಾಗೂ ತಿಪಟೂರು ಕ್ಷೇತ್ರದ ಮಾಜಿ ಶಾಸಕರಾದ ಬಿ.ಸಿ.ನಾಗೇಶ್ (67) ಅವರು ಅನಾರೋಗ್ಯದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿಯಂತೆ, ಸದ್ಧಿಲ್ಲದೆ ಕಾರ್ಯನಿರ್ವಹಿಸುತ್ತಿದ್ದ ಅವರ ನಿಧನ ಸುದ್ದಿ ಕೇಳಿ ರಾಜ್ಯ ರಾಜಕೀಯ ಕ್ಷೇತ್ರ, ಅವರ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರಲ್ಲಿ ತೀವ್ರ ಶೋಕ ಸಾಗರ ಮನೆಮಾಡಿದೆ.

ಶೈಕ್ಷಣಿಕ ರಂಗದಲ್ಲಿ ಕ್ರಾಂತಿಕಾರಿ ನಿರ್ಧಾರಗಳು!
ಬಿಜೆಪಿ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾಗಿ (ಸಕಾಲ ಇಲಾಖೆಯ ಉಸ್ತುವಾರಿಯನ್ನೂ ವಹಿಸಿಕೊಂಡಿದ್ದರು) ಕಾರ್ಯನಿರ್ವಹಿಸಿದ್ದ ಬಿ.ಸಿ. ನಾಗೇಶ್ ಅವರು ತಮ್ಮ ಆಡಳಿತಾವಧಿಯಲ್ಲಿ ಹಲವು ಪ್ರಮುಖ ಹಾಗೂ ದಿಟ್ಟ ನಿರ್ಧಾರಗಳನ್ನು ಕೈಗೊಂಡು ಕರಾವಳಿಯಿಂದ ಹಿಡಿದು ಕಲ್ಯಾಣ ಕರ್ನಾಟಕದವರೆಗೆ ರಾಜ್ಯಾದ್ಯಂತ ದೊಡ್ಡ ಮಟ್ಟದ ಸುದ್ದಿಯಲ್ಲಿದ್ದರು.

ಪಠ್ಯಪುಸ್ತಕ ಪರಿಷ್ಕರಣೆ; ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆ ವಿಷಯದಲ್ಲಿ ಅತ್ಯಂತ ಧೈರ್ಯದಿಂದ ಹೆಜ್ಜೆ ಇಟ್ಟು, ತಮ್ಮ ಸಿದ್ಧಾಂತ ಹಾಗೂ ನಿಲುವಿಗೆ ಬದ್ಧರಾಗಿ ಕಾರ್ಯನಿರ್ವಹಿಸಿದ್ದರು

ಶಾಲಾ ಸಮವಸ್ತ್ರ ನಿಯಮ; ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ನಿಯಮ ಮತ್ತು ಶಿಸ್ತು ಪಾಲನೆ ವಿಷಯದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಮೂಲಕ ದೇಶದ ಗಮನ ಸೆಳೆದಿದ್ದರು.

ಶಿಕ್ಷಣದಲ್ಲಿ ಮೌಲ್ಯವರ್ಧನೆ; ಶಾಲಾ ಮಕ್ಕಳಲ್ಲಿ ನೈತಿಕ ಮೌಲ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಶಾಲಾ ಪ್ರಾರ್ಥನೆ ಮತ್ತು ಕಲಿವಿನ ವಾತಾವರಣ ಸುಧಾರಣೆಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು.

ಸಂಘ ಪರಿವಾರದ ಶಿಸ್ತು, ಸರಳತೆಯ ವ್ಯಕ್ತಿತ್ವ!
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಹಿನ್ನೆಲೆಯಿಂದ ಬಂದಿದ್ದ ಬಿ.ಸಿ. ನಾಗೇಶ್ ಅವರು ರಾಜಕೀಯಕ್ಕೆ ಬಂದ ಮೇಲೆಯೂ ತಮ್ಮ ಸರಳತೆಯನ್ನು ಎಂದಿಗೂ ಬಿಟ್ಟುಕೊಡಲಿಲ್ಲ. ತುಮಕೂರು ಜಿಲ್ಲೆಯ ತಿಪಟೂರು ಕ್ಷೇತ್ರ ಪ್ರತಿನಿಧಿಸುತ್ತಿದ್ದ ಅವರು ಕ್ಷೇತ್ರದ ಜನರೊಂದಿಗೆ ಅತ್ಯಂತ ನಿಕಟ ಹಾಗೂ ಪ್ರೀತಿಯ ಬಾಂಧವ್ಯ ಹೊಂದಿದ್ದರು. ವಿಧಾನಸಭೆಯ ಸದಸ್ಯರಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ ಅವರು, ಜನಸಾಮಾನ್ಯರ ಕಷ್ಟಗಳಿಗೆ ತಕ್ಷಣ ಸ್ಪಂದಿಸುವ ಗುಣದಿಂದಾಗಿ ‘ಟಿಪಟೂರಿನ ಜನಪ್ರಿಯ ನಾಯಕ’ ಎನಿಸಿಕೊಂಡಿದ್ದರು. ರಾಜಕೀಯದಲ್ಲಿ ಅಧಿಕಾರ ಅನುಭವಿಸಿದರೂ ಯಾವುದೇ ಹಮ್ಮು-ಬಿಮ್ಮು ಇಲ್ಲದೆ, ಶಾಸಕರಾಗಿಯೂ, ಸಚಿವರಾಗಿಯೂ ಕೇವಲ ಕರ್ತವ್ಯಕ್ಕೆ ಆದ್ಯತೆ ನೀಡಿದ ಅಪರೂಪದ ವ್ಯಕ್ತಿತ್ವ ಅವರದ್ದಾಗಿತ್ತು.

Leave a Reply

Your email address will not be published. Required fields are marked *