BBMP
Loading ...

Pradosh

Greater Bengaluru News9 : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್‌ಗೆ ಅತಿದೊಡ್ಡ ಸಂಕಷ್ಟ ಎದುರಾಗಿದೆ. ಪ್ರಕರಣದ 14ನೇ ಆರೋಪಿಯಾಗಿದ್ದ ಪ್ರದೋಷ್ ಸಲ್ಲಿಸಿದ್ದ ಮಾಫಿ ಸಾಕ್ಷಿ ಅರ್ಜಿಯನ್ನು ಕೋರ್ಟ್ ಅಂಗೀಕರಿಸಿದೆ.

ಸಿಸಿಎಚ್‌ 42 ಕೋರ್ಟ್ ನ್ಯಾಯಾಧೀಶರು ಪ್ರದೋಷ್ ಅವರ ಮಾಫಿ ಸಾಕ್ಷಿಗೆ ಒಪ್ಪಿಗೆ ನೀಡಿ ಆದೇಶ ಹೊರಡಿಸಿದ್ದಾರೆ. ಕೆಲವು ನಿಬಂಧನೆಗಳನ್ನು ವಿಧಿಸಿ ಕೋರ್ಟ್ ಈ ಅನುಮತಿ ನೀಡಿದ್ದು, ಗೊತ್ತಿರುವ ಎಲ್ಲಾ ಸತ್ಯವನ್ನು ಕೋರ್ಟ್ ಮುಂದೆ ಹೇಳಬೇಕು ಎಂದು ಷರತ್ತು ವಿಧಿಸಲಾಗಿದೆ. ಸುಳ್ಳು ನುಡಿದಲ್ಲಿ ಪ್ರಾಸಿಕ್ಯೂಷನ್ ಸೂಕ್ತ ತೀರ್ಮಾನ ತೆಗೆದುಕೊಳ್ಳುವ ಅವಕಾಶವಿದೆ ಎಂದೂ ಸ್ಪಷ್ಟಪಡಿಸಲಾಗಿದೆ.

ಪ್ರದೋಷ್ ಅಪ್ರೂವರ್ ಆಗಿ ಸಾಕ್ಷಿಯಾಗಿರುವ ಹಿನ್ನೆಲೆಯಲ್ಲಿ ಪ್ರಕರಣದ ಉಳಿದ 16 ಮಂದಿಗೆ ಸಂಕಷ್ಟ ಎದುರಾಗಿದೆ. ದರ್ಶನ್ ಮತ್ತು ಗ್ಯಾಂಗ್ ವಿರುದ್ಧ ಪ್ರದೋಷ್ ಸಾಕ್ಷ್ಯ ನುಡಿಯಲಿದ್ದಾರೆ. ಟ್ರಯಲ್ ಮುಗಿಯುವವರೆಗೂ ಪ್ರದೋಷ್ ಜೈಲಿನಲ್ಲೇ ಇರಬೇಕಿದ್ದು, ಗೊತ್ತಿರುವ ಮಾಹಿತಿಯನ್ನು ಸರಿಯಾಗಿ ತಿಳಿಸಬೇಕು. ತಪ್ಪು ಹೇಳಿಕೆ ನೀಡಿದಲ್ಲಿ ಮತ್ತೆ ಆರೋಪಿಯಾಗಿ ಪರಿಗಣಿಸಲಾಗುವುದು ಎಂದು ಕೋರ್ಟ್ ತಿಳಿಸಿದೆ.

Leave a Reply

Your email address will not be published. Required fields are marked *