BBMP
Loading ...

ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ಬಳಿ ಗುರುವಾರ ನಡುರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿ ಮೃತಪಟ್ಟಿದ್ದಾರೆ.

ವಾಟದಹೊಸಹಳ್ಳಿ ಉಪವಿದ್ಯುತ್ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಣುಗೋಪಾಲ್, ಮಂಜುನಾಥ್, ಶ್ರೀಧರ್ ಮೃತರು. ಶಿವಕುಮಾರ್ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನಲ್ಲಿ ಈ ನಾಲ್ಕು ಮಂದಿ ನಗರಗೆರೆಯಿಂದ ವಾಟದಹೊಸಹಳ್ಳಿ ಉಪವಿದ್ಯುತ್ ಕೇಂದ್ರಕ್ಕೆ ಬರುತ್ತಿದ್ದರು. ಗ್ರಾಮದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದಿದೆ. ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಲೋಕಸಭಾ ಚುನಾವಣೆ: ಬೆಂಗಳೂರಿನಲ್ಲಿ ಕಾಂಗ್ರೆಸ್ ಹೀನಾಯ ಸೋಲು, ಬಿಬಿಎಂಪಿ ಚುನಾವಣೆ ಮೇಲೂ ಎಫೆಕ್ಟ್!

Leave a Reply

Your email address will not be published. Required fields are marked *