BBMP
Loading ...

ಬೆಂಗಳೂರು: ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಫುಲ್ ಅಲರ್ಟ್ ಆಗಿದ್ದಾರೆ. ಯಾವುದೇ ಕಾರಣಕ್ಕೂ ಈ ಕೇಸ್​ನಲ್ಲಿ ಭಾಗಿಯಾಗಿದಂತೆ ಸಿಎಂ ಸಿದ್ದರಾಮಯ್ಯ ಅವರು ಸಚಿವ ಜಮೀರ್ ಅಹ್ಮದ್ ಅವರಿಗೆ ವಾರ್ನಿಂಗ್ ಕೊಟ್ಟಿದ್ದಾರೆ.

ಚಾಲೆಜಿಂಗ್ ಸ್ಟಾರ್ ದರ್ಶನ್ ಹಾಗೂ ಸಚಿವ ಜಮೀರ್ ಇಬ್ಬರೂ ಆಪ್ತರು ಎಂಬುದು ಇಡೀ ರಾಜ್ಯಕ್ಕೆ ಗೊತ್ತಿರುವ ಸಂಗತಿ. ಜಮೀರ್ ಪುತ್ರನ ಸಿನಿಮಾ ಪ್ರಮೋಷನ್​ಗೆ ಡಿಬಾಸ್ ಸಹಾಯ ಮಾಡಿದ್ದರು. ರೇಣುಕಾಸ್ವಾಮಿ ಕೇಸ್​ನಲ್ಲಿ ಇನ್ವಾಲ್ ಆಗಬೇಡ. ದರ್ಶನ್ ವಿರುದ್ಧ ಸೀರಿಯಸ್ ಅಲಿಗೇಷನ್ ಇದೆ ಎಂದು ಸಿದ್ದರಾಮಯ್ಯ ಅವರು ಜಮೀರ್​ಗೆ ತಿಳಿಸಿದ್ದಾರೆ.

ಒಂದು ವೇಳೆ ಈ ಕೇಸ್​ನಲ್ಲಿ ನಿನ್ನ ಹೆಸರು ಬಂದರೆ, ಬಳ್ಳಾರಿ ಗ್ರಾಮೀಣ ಶಾಸಕ ಹಾಗೂ ಮಾಜಿ ಸಚಿವ ನಾಗೇಂದ್ರನಿಗೆ ಬಂದ ಗತಿ ನಿನಗೂ ಬರುತ್ತದೆ. ದರ್ಶನ್ ಹಾಗೂ ನಿನ್ನ ಸ್ನೇಹ ನನಗೂ ಗೊತ್ತಿದೆ. ಆದರೆ, ಈ ಕೇಸ್​ನಿಂದ ದೂರ ಇರು ಎಂದು ಸಿಎಂ ಸಿದ್ದರಾಮಯ್ಯ ಅವರು ಖಡಕ್​ ಆಗಿ ಜಮೀರ್​ಗೆ ಹೇಳಿದ್ದಾರೆ.

ಸಿಎಂ ಸೂಚನೆಗೆ ಜಮೀರ್ ಅವರು ಮರು ಮಾತನಾಡದೇ ಆಯ್ತು ಸರ್ ಎಂದಿದ್ದಾರೆ. ಮಾಧ್ಯಮಗಳ ಮುಂದೆ ಹೇಳಿಕೆಗಳನ್ನು ಕೊಡುವಾಗ ಎಚ್ಚರಿಕೆ ವಹಿಸು. ನಿನ್ನಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರಬಾರದು ಎಂದು ಜಮೀರ್​ಗೆ ಸಿಎಂ ಸಲಹೆ ನೀಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್‌, ಪವಿತ್ರಾ ಗೌಡ ಸೇರಿ 13 ಆರೋಪಿಗಳನ್ನು 6 ದಿನ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ಆರೋಪಿಗಳನ್ನು ಮಂಗಳವಾರ ಸಂಜೆ ಕೋರಮಂಗಲದ 24ನೇ ಎಸಿಎಂಎಂ ಕೋರ್ಟ್‌ನ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರ ಮುಂದೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಲು ನ್ಯಾಯಾಧೀಶರು ಆದೇಶ ನೀಡಿದ್ದಾರೆ.

ಶವ ಎಸೆಯಲು, ಕೊಲೆ ಆರೋಪ ಹೊತ್ತುಕೊಳ್ಳಲು 30 ಲಕ್ಷ ಹಣ ಕೊಟ್ಟಿದ್ದ ದರ್ಶನ್‌?

ಅಪ್ರಾಪ್ತ ಮಕ್ಕಳಿಗೆ ವಾಹನ ಕೊಟ್ಟು ಅಪಘಾತವಾದರೆ ವಾಹನದ ಮಾಲೀಕರೇ ಪರಿಹಾರ ನೀಡಬೇಕೇ ಹೊರತು ವಿಮಾ ಕಂಪನಿಯಲ್ಲ

Leave a Reply

Your email address will not be published. Required fields are marked *