ಹಾವೇರಿ: ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ನಡೆದು ಇಬ್ಬರು ಮಕ್ಕಳು ಸೇರಿದಂತೆ 13 ಜನರು ಮೃತಪಟ್ಟ ದುರ್ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮಿಹಟ್ಟಿ ಗ್ರಾಮದವರು ಎಂದು ತಿಳಿದು ಬಂದಿದೆ. ಮೃತರನ್ನು ಪರಶುರಾಮ್, ಭಾಗ್ಯ, ನಾಗೇಶ್, ವಿಶಾಲಾಕ್ಷಿ, ಅರ್ಪಿತಾ, ಸುಭದ್ರಾ ಬಾಯಿ, ಪುಣ್ಯ, ಮಂಜುಳಾ ಬಾಯಿ, ಆದರ್ಶ ಮಾನಸ, ರೂಪ, ಮಂಜುಳಾ ಎಂದು ಗುರುತಿಸಲಾಗಿದೆ. ಸದ್ಯ ಹದಿಮೂರು ಜನರ ಸಾವು ದೃಢವಾಗಿದೆ. ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಈ ದುರ್ಘಟನೆಯಲ್ಲಿ ಸಣ್ಣ ಸಣ್ಣ ಮಕ್ಕಳು ಕೂಡ ಮೃತಪಟ್ಟಿದ್ದಾರೆ. ತಾಯಿಯ ಎದುರೆ ಅವಳಿ ಮಕ್ಕಳ ಸಾವು ಕಂಡು ಆಂಬ್ಯುಲೆನ್ಸ್ ಸಿಬ್ಬಂದಿ ಕಣ್ಣೀರು ಹಾಕಿದ್ದಾರೆ.
ಅಪಘಾತದಲ್ಲಿ ಟಿಟಿ ವಾಹನ ನುಜ್ಜು ಗುಜ್ಜಾಗಿದ್ದು, ವಾಹನದಲ್ಲಿ ಸಿಲುಕಿಕೊಂಡಿದ್ದ ಮೃತದೇಹಗಳನ್ನು ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಹೊರ ತಗೆದು ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ.
ಟಿಟಿ ವಾಹನದಲ್ಲಿ 15 ಜನರು ಪ್ರಯಾಣಿಸುತ್ತಿದ್ದರು. ಇದರಲ್ಲಿ 13 ಜನರು ಮೃತಪಟ್ಟಿದ್ದು, ಇಬ್ಬರು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಎಸ್ ಪಿ ಅಂಶುಕುಮಾರ ತಿಳಿಸಿದ್ದಾರೆ.
ಮಂಗನಹಳ್ಳಿ ಕ್ರಾಸ್ನಲ್ಲಿ ನೂತನ ಮಲ್ಲೇಶ್ವರ ಕೆಫೆಯನ್ನು ಉದ್ಘಾಟಿಸಿದ ನಂಜಾವಧೂತ ಸ್ವಾಮೀಜಿಗಳು


