BBMP
Loading ...

BBMP

ಬೆಂಗಳೂರು: ಅಸ್ತಿತ್ವದಲ್ಲಿ ಇಲ್ಲದ ಸೊಸೈಟಿಗಳಿಗೆ ಬಿಬಿಎಂಪಿಯ ಕಲ್ಯಾಣ ಇಲಾಖೆಯಿಂದ ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪದ ಮೇಲೆ ಬಿಬಿಎಂಪಿಯ ಒಂಬತ್ತು ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ.

ಹೌದು…. ಕೊರೊನಾ ಸಮಯದಲ್ಲಿ ಅಸ್ತಿತ್ವದಲ್ಲೇ ಇಲ್ಲದ ಕೋ ಆಪರೇಟಿವ್ ಸೊಸೈಟಿ, ಸೊಸೈಟಿ, ಸಹಕಾರಿ ಸಂಘಗಳಿಗೆ ಕೋಟಿ ಕೋಟಿ ಹಣ ವರ್ಗಾವಣೆ ಮಾಡಲಾಗಿದೆ ಎಂದು ಲೋಕಾಯುಕ್ತಕ್ಕೆ ದೂರು ಬಂದಿದೆ. ಈ ಅಕ್ರಮ ಹಣ ವರ್ಗಾವಣೆಯಲ್ಲಿ ಹಣಕಾಸು ವಿಭಾಗದ ಒಂಬತ್ತು ಅಧಿಕಾರಿಗಳು ಭಾಗಿಯಾಗಿದ್ದಾರೆಂದು ಆರೋಪ ಮಾಡಲಾಗಿದೆ. ಸುಮಾರು 102 ಕೋಟಿ ರೂ. ಹಣ ಅಕ್ರಮವಾಗಿದೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ. ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು, ಅಂಗವಿಕಲರು, ವಿಧವೆಯರ ಹೆಸರಿನಲ್ಲಿ ಅಕ್ರಮವಾಗಿ ಹಣ ಕೊಳ್ಳೆ ಹೊಡೆಯಲಾಗಿದೆ ಎನ್ನಲಾಗಿದೆ.

ಲೋಕಾಯುಕ್ತ ತನಿಖೆಗೆ ಅನುಮತಿ ಕೋರಿ ಪಾಲಿಕೆಯ ವಿಶೇಷ ಆಯುಕ್ತರಿಗೆ ಪತ್ರ ಬರೆಯಲಾಗಿದೆ. ಅನುಮತಿ ಪಡೆದು ಲೋಕಾಯುಕ್ತ ಅಧಿಕಾರಿಗಳು ರಾಜ್ಯ ಲೆಕ್ಕ ಪರಿಶೋಧನೆ ಇಲಾಖೆಯಿಂದ ಅಕ್ರಮ ನಡೆಸಿದ ಅಧಿಕಾರಿಗಳ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಅಕ್ರಮ ಹಣ ವರ್ಗಾವಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ಎಸ್.ವಿ.ಗಿರಿಯಪ್ಪ, ಲಿಂಗಣ್ಣ ಗುಂಡಳ್ಳಿ, ಸುಬೇಶ್, ಸತ್ಯಮೂರ್ತಿ, ಎಸ್‌ಎಸ್ ದೇವಕಿ, ಎಸ್‌.ವಿ.ಗಿರಯಪ್ಪ, ಬಿ.ಗಾಯತ್ರಿ, ಎನ್‌.ಗೀತಾ, ಜಿ.ಎನ್‌.ಸುಬ್ಬರಾಮಯ್ಯ, ಕುಮಾರಿ ಕುಸುಮಾ ಎಂಬುವವರ ವಿರುದ್ಧ ದೂರು ದಾಖಲಾಗಿದೆ.

ಪಾನಿಪುರಿ ಪ್ರಿಯರಿಗೆ ಬಿಗ್ ಶಾಕ್ ! ಬ್ಯಾನ್ ಆಗಲಿದೆ ಪಾನಿಪುರಿ ಮಸಾಲೆ ?!

Leave a Reply

Your email address will not be published. Required fields are marked *