BBMP
Loading ...

ದಾವಣಗೆರೆ: ಕರೆಂಟ್ ಕಂಬಕ್ಕೆ ಹತ್ತಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿದ ಪರಿಣಾಮ ಕೂಲಿ ಕಾರ್ಮಿಕನೋರ್ವ ಗಂಭೀರ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಮಾಳಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹೊಸದಾಗಿ ನಿರ್ಮಾಣಗೊಳ್ಳುತ್ತಿರುವ ಆಂಜನೇಯ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಗಾಯಗೊಂಡ ಕೂಲಿ ಕಾರ್ಮಿಕ ಗೋಗುದ್ದು ಗ್ರಾಮದ ದಾದು(29) ಎಂದು ಗುರುತಿಸಲಾಗಿದೆ.

ಬಡಾವಣೆಯಲ್ಲಿ ವಿದ್ಯುತ್ ಕಂಬ ಅಳವಡಿಸುವ ಕಾಮಗಾರಿಯನ್ನು ಗುತ್ತಿಗೆದಾರ ಕಾಳಪ್ಪ ಎನ್ನುವವರು ಕೈಗೆತ್ತಿಕೊಂಡಿದ್ದರು. ಬೆಳಗ್ಗೆ ಕೆಲಸ ಆರಂಭಿಸುವ ಮುನ್ನ ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕಾಗಿತ್ತು. ಈ ಬಗ್ಗೆ ಬೆಸ್ಕಾಂ ಇಲಾಖೆಯ ಅಧಿಕಾರಿಗಳ ಪೂರ್ವಾನುಮತಿ ಹಾಗೂ ಲೈನ್ ಮನ್ ಗಮನಕ್ಕೆ ತರಬೇಕಿದ್ದ ಗುತ್ತಿಗೆದಾರ, ಇದ್ಯಾವುದನ್ನು ಅನುಸರಿಸದೆ ಏಕಾಏಕಿ ವಿದ್ಯುತ್ ಕಂಬ ಏರಿಸಿ ಕೆಲಸ ಮಾಡಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ಸಿಹಿ ಸುದ್ದಿ ಕೊಟ್ಟ ಬಿಬಿಎಂಪಿ: ಆಸ್ತಿ ತೆರಿಗೆ ಹೆಚ್ಚಳವಿಲ್ಲ, OTS ಮೂಲಕ ತೆರಿಗೆ ಪಾವತಿಸಿದರೆ ಬಡ್ಡಿ ಮನ್ನ, ಶೇ.5 ರಿಯಾಯಿತಿ ಅವಧಿ ವಿಸ್ತರಣೆ

Leave a Reply

Your email address will not be published. Required fields are marked *