ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟಿಎಸ್ ಯೋಜನೆಯಡಿ 3.2 ಲಕ್ಷ ಸುಸ್ತಿದಾರರು ಆಸ್ತಿ ತೆರಿಗೆ ಬಾಕಿ ಪಾವತಿಸಬೇಕಿದ್ದು, ಶೀಘ್ರವೇ ಸಂಬಧಪಟ್ಟವರು ಈ ಬಗ್ಗೆ ಗಮನ ಹರಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ತಿಳಿಸಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಚೇರಿಯ ಮುಖ್ಯ ಆಯುಕ್ತರ ಕಚೇಯಲ್ಲಿ ನಡೆದ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ” ಬಿಬಿಎಂಪಿ ವ್ಯಾಪ್ತಿಯಲ್ಲಿ ಬಾಕಿ ಆಸ್ತಿ ತೆರಿಗೆ ಪಾವತಿಸುವವರಿಗಾಗಿ ಜಾರಿಗೊಳಿಸಿರುವ ಒಂದು ಬಾರಿ ಪರಿಹಾರ ಯೋಜನೆ(ಒಟಿಎಸ್)ಯು ಇದೇ ಜುಲೈ 31ಕ್ಕೆ ಮುಗಿಯಲಿದ್ದು, ನಾಗರೀಕರು ಕೂಡಲೆ ಇದರ ಸದುಪಯೋಗವನ್ನು ಪಡೆದುಕೊಳ್ಳ ಬೇಕು ” ತಿಳಿಸಿದರು.
80 ಸಾವಿರ ಮಂದಿ ಮಾತ್ರ ಪಾವತಿ
ನಗರದಲ್ಲಿ ಒಂದು ಬಾರಿ ಪರಿಹಾರ ಯೋಜನೆಯಡಿ ಸುಮಾರು 4 ಲಕ್ಷ ಸುಸ್ತಿದಾರರು ಬರಲಿದ್ದು, ಈ ಪೈಕಿ ಇದುವರೆಗೆ 80 ಸಾವಿರ ಸುಸ್ತಿದಾರರು ಇದರ ಸದುಪಯೋಗ ಪಡೆದು ಬಾಕಿ ಆಸ್ತಿ ತೆರಿಗೆಯನ್ನು ಪಾವತಿಸಿದ್ದಾರೆ. ಉಳಿದ 3.20 ಲಕ್ಷ ಸುಸ್ತಿದಾರರಿಗೆ ಜುಲೈ 31 ರವರೆಗೆ ಮಾತ್ರ ಅವಕಾಶವಿದ್ದು, ಕೂಡಲೆ ಇದರ ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದರು.
1533 ಸಹಾಯವಾಣಿಗೆ ಕರೆ ಮಾಡಿ
ಒಂದು ಬಾರಿ ಪರಿಹಾರ(OTS) ಯೋಜನೆಯಡಿ ಬಾಕಿ ಆಸ್ತಿ ತೆರಿಗೆ ಪಾವತಿಸುವವರಿಗೆ ಎಷ್ಟು ಪಾವತಿಸಬೇಕಿದೆ, ಎಲ್ಲಿ ಪಾವತಿಸಬೇಕು ಎಂಬುದು ಸೇರಿದಂತೆ ಇನ್ನಿತ್ಯಾದಿ ಗೊಂದಲಗಳಿದ್ದರೆ ಪಾಲಿಕೆಯ ಉಚಿತ ಸಹಾಯವಾಣಿ ಸಂಖ್ಯೆಯಾದ 1533ಗೆ ಕರೆ ಮಾಡಿ ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳಬಹುದು ಎಂದು ಹೇಳಿದರು.
ರಾಮನಗರ ಜಿಲ್ಲೆ ಸೇರಿಸಿಕೊಂಡು ಬೆಂಗಳೂರು ದಕ್ಷಿಣ ಜಿಲ್ಲೆ ರಚನೆಗೆ ಬೇಡಿಕೆ: ಸಿಎಂಗೆ ಡಿಕೆಶಿ ನಿಯೋಗ ಮನವಿ


