BBMP
Loading ...

Renukaswamy

ನೆಲಮಂಗಲ: ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದೆ. ಕುಶಾಲ್ ಹಲ್ಲೆಗೊಳಗಾದ ಯುವಕ. ಪ್ರಕರಣ ಸಂಬಂಧ ಸೋಲದೇವನಹಳ್ಳಿ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕಾಲೇಜಿನ ದಿನಗಳಲ್ಲಿ ಕುಶಾಲ್ ಮತ್ತು ಯುವತಿ ಮಧ್ಯೆ ಪ್ರೀತಿ ಅರಳಿತ್ತು. ಎರಡು ವರ್ಷದ ಪ್ರೀತಿ ಕೆಲವು ತಿಂಗಳ ಹಿಂದೆ ಮುರಿದು ಬಿದ್ದಿತ್ತು. ಈ ವೇಳೆ ಯುವತಿಗೆ ಬೇರೊಬ್ಬ ಹುಡುಗನ ಪರಿಚಯವಾಗಿತ್ತು. ಇದನ್ನು ಸಹಿಸಲಾಗದೆ ಕುಶಾಲ್, ಯುವತಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದನು. ಹೀಗಾಗಿ, ಯುವತಿಯ ಗೆಳೆಯ ಮತ್ತು ಆತನ ಸ್ನೇಹಿತರು ಸೇರಿಕೊಂಡು ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಅಂತ ಕುಶಾಲ್​ನನ್ನು ಬಾಗಲಗುಂಟೆಯ ಎಜಿಪಿ ಲೇಔಟ್​ಗೆ ಕರೆಸಿಕೊಂಡು ಅಪಹರಿಸಿದ್ದಾರೆ.

ಬಳಿಕ, ಆರೋಪಿಗಳು ಕುಶಾಲ್​ನನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಕುಶಾಲ್​ನ ಬಟ್ಟೆ ಬಿಚ್ಚಿ ಮರ್ಮಾಂಗ ತುಳಿದು ವಿಕೃತಿ ಮೆರೆದಿದ್ದಾರೆ. ಕುಶಾಲ್​ನ​ ಬಟ್ಟೆ ಬಿಚ್ಚಿ ಹಲ್ಲೆ ಮಾಡಿರುವುದನ್ನು ಆರೋಪಿಗಳು ವಿಡಿಯೋ ಮಾಡಿಕೊಂಡಿದ್ದಾರೆ. ವಿಡಿಯೋದಲ್ಲಿ ಆರೋಪಿಗಳು, ರೇಣುಕಾಸ್ವಾಮಿ ಕೊಲೆ ಕೇಸ್​ನಂತೆ ಇದೂ ಆಗುತ್ತೆ. ಎ1 ಹೇಮಂತ ಎ2 ನಾನು ಎಂದು ವಿಡಿಯೋದಲ್ಲಿ ಹೇಳಿದ್ದಾರೆ. ಬಳಿಕ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಕುಶಾಲ್​ಗೆ ಆರೋಪಿಗಳು ಬೆದರಿಕೆ ಹಾಕಿದ್ದಾರೆ.

ಈ ಘಟನೆ ಸಂಬಂಧ ಸೋಲದೇವನಹಳ್ಳಿ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಹೇಮಂತ್, ಯಶವಂತ್​, ಶಿವಶಂಕರ್, ಶಶಾಂಕ್ ಗೌಡ ಬಂಧಿತರು. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯಾದ್ಯಂತ ಬಿ – ಖಾತಾ ಆಸ್ತಿಗೆ ದುಪ್ಪಟ್ಟು ತೆರಿಗೆ! ಕರಡು ನಿಯಮ ಹೊರಡಿಸಿದ ಸರ್ಕಾರ

Leave a Reply

Your email address will not be published. Required fields are marked *