ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತ ಇರುವವರಿಗೆ ಇಲ್ಲೊಂದು ಭರ್ಜರಿ ಗುಡ್‌ನ್ಯೂಸ್ ಇದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಬದಲಿಗೆ ಗ್ರೇಟರ್ ಬೆಂಗಳೂರು ಆಡಳಿತ ಜಾರಿಯಾಗುತ್ತಿದ್ದು. ಇದರ ಭಾಗವಾಗಿ ಬೆಂಗಳೂರು ಮುಂದಿನ ದಿನಗಳಲ್ಲಿ ಮೂರು ಭಾಗವಾಗಿ ವಿಭಜನೆ ಆಗಲಿದೆ. ಹೊಸ ಗಡಿಗಳು ರಚನೆ ಆಗಲಿದ್ದು, ಹೊಸ ಪ್ರದೇಶಗಳು ಗ್ರೇಟರ್ ಬೆಂಗಳೂರಿಗೆ ಸೇರ್ಪಡೆ ಆಗಲಿದೆ. ಹೀಗಾಗಿ, ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಧಮಾಕ ಶುರುವಾಗಿದೆ. ಬೆಂಗಳೂರಿಗೆ ಹೊಸ ಪ್ರದೇಶಗಳು ಸೇರುವ ಲೆಕ್ಕಾಚಾರ ಜೋರಾಗಿ ಇರುವ ಹಿನ್ನೆಲೆಯಲ್ಲಿ ವಿವಿಧ ಭಾಗಗಳಲ್ಲಿ ಭೂಮಿ ಬೆಲೆ ಹೆಚ್ಚಳವಾಗುತ್ತಿದೆ. ಬೆಂಗಳೂರಿಗೆ ಯಾವ ಪ್ರದೇಶಗಳು ಸೇರ್ಪಡೆ ಆಗುತ್ತಿವೆ. ಎಲ್ಲೆಲ್ಲಿ ಭೂಮಿ ಬೆಲೆ ಹೆಚ್ಚಳವಾಗುತ್ತಿದೆ ಎನ್ನುವ ಮಾಹಿತಿ ಇಲ್ಲಿದೆ.
ಬೆಂಗಳೂರಿನಲ್ಲಿ ಬಿಬಿಎಂಪಿಯ ಯುಗಾಂತ್ಯ ಶುರುವಾಗಿದೆ. ಇನ್ನು ಈಗಾಗಲೇ ಗ್ರೇಟರ್ ಬೆಂಗಳೂರು ಆಡಳಿತಕ್ಕೆ ಸಂಬಂಧಿಸಿದಂತೆ ಪ್ರಕ್ರಿಯೆ ಜೋರಾಗಿದ್ದು. ಮುಂದಿನ ದಿನಗಳಲ್ಲಿ ಮೂರು ಅಥವಾ ಐದು ಮಹಾನಗರ ಪಾಲಿಕೆಗಳು ಬೆಂಗಳೂರಿಗೆ ಬರುವ ಸಾಧ್ಯತೆ ಇದೆ. ಇದರಿಂದ ಈಗ ಇರುವ ಬೆಂಗಳೂರಿನ ಪ್ರದೇಶದಲ್ಲಿ ಭಾರೀ ಬದಲಾವಣೆಗಳು ಆಗಲಿವೆ.
ಅದರಲ್ಲಿ ಮುಖ್ಯವಾಗಿ ಬೆಂಗಳೂರಿನ ಸುತ್ತಮುತ್ತಲಿನ ಪ್ರಮುಖ ಪ್ರದೇಶಗಳು ಬೆಂಗಳೂರಿಗೆ ಸೇರ್ಪಡೆ ಆಗುವುದು ಸಹ ಸೇರಿದೆ. ಬೆಂಗಳೂರಿನ ಬ್ರ್ಯಾಂಡ್ ವ್ಯಾಲ್ಯೂ ಹೆಚ್ಚಾಗಿದೆ. ಹೀಗಾಗಿ, ಬೆಂಗಳೂರಿಗೆ ಹೊಸ ಪ್ರದೇಶಗಳು ಸೇರ್ಪಡೆ ಆಗುವುದರಿಂದ ಆ ಪ್ರದೇಶಗಳಿಗೂ ಬೆಂಗಳೂರಿನ ಬ್ರ್ಯಾಂಡ್ ವ್ಯಾಲ್ಯೂ ಹೆಚ್ಚಾಗಲಿದ್ದು. ಭೂಮಿಗೆ ಬಂಗಾರದ ಬೆಲೆ ಬರಲಿದೆ ಎಂದು ನಿರೀಕ್ಷೆ ಮಾಡಲಾಗಿದೆ.
ಸಿಲಿಕಾನ್ ಸಿಟಿಯ ವಿಸ್ತೀರ್ಣ ಇತ್ತೀಚಿನ ವರ್ಷಗಳಲ್ಲಿ ಸಾಕಷ್ಟು ವಿಸ್ತರಿಸಿದೆ. ಅಲ್ಲದೇ ರಿಯಲ್ ಎಸ್ಟೇಟ್‌ಗೂ ಪೂರಕ ವಾತಾವರಣವಿದೆ. ಇದೀಗ ಬೆಂಗಳೂರನ್ನು ಮೂರು ಭಾಗಗಳನ್ನಾಗಿ ವಿಭಜನೆ ಮಾಡಿ, ಹೊಸ ಪಾಲಿಕೆಗಳನ್ನು ಸೃಷ್ಟಿ ಮಾಡುವುದಕ್ಕೆ ಸರ್ಕಾರ ಮುಂದಾಗಿದೆ. ಈ ರೀತಿ ಮಾಡುವ ಹಂತದಲ್ಲಿ ಬೆಂಗಳೂರಿಗೆ ಇನ್ನಷ್ಟು ಹೊಸ ಪ್ರದೇಶಗಳು ಸೇರ್ಪಡೆ ಆಗಲಿವೆ. ಇದರಿಂದ ಹೊಸ ಪ್ರದೇಶಗಳಲ್ಲಿ ಭೂಮಿಗೆ ಭರ್ಜರಿ ಬೆಲೆ ಬರಲಿದೆ ಅಂತಲೇ ಹೇಳಲಾಗುತ್ತಿದೆ. ಬೆಂಗಳೂರಿಗೆ ಹೊಸದಾಗಿ ಸೇರಲಿರುವ ಪ್ರದೇಶಗಳ ವಿವರ ನೋಡೋಣ..
ಬೆಂಗಳೂರಿಗೆ ಹೊಸ ಪ್ರದೇಶಗಳ ಸೇರ್ಪಡೆ ಹಾಗೂ ವಿಸ್ತರಣೆ: ಇನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಗ್ರೇಟರ್ ಬೆಂಗಳೂರು ಆಗಿ ಬದಲಾಗಲಿದೆ. ಇದರೊಂದಿಗೆ ಸರ್ಜಾಪುರ, ಬಾಗಲೂರು, ರಾಜಾನುಕುಂಟೆ, ಹೆಸರಘಟ್ಟ, ದಾಸನಪುರ, ಮಾಕಳಿ, ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿ, ಎಲೆಕ್ಟ್ರಾನಿಕ್ ಸಿಟಿ, ಅತ್ತಿಬೆಲೆ, ಜಿಗಣಿ ಕೈಗಾರಿಕೆ ಪ್ರದೇಶ ಹಾಗೂ ಬೊಮ್ಮಸಂದ್ರ ಪ್ರದೇಶಗಳು ಸೇರ್ಪಡೆಗೊಳ್ಳಲಿದೆ. ಅಲ್ಲದೇ ಕೆಲವು ಪ್ರಮುಖ ಕೈಗಾರಿಕಾ ಪ್ರದೇಶಗಳೂ ಸಹ ಬೆಂಗಳೂರಿಗೆ ಸೇರ್ಪಡೆ ಆಗುವ ಸಾಧ್ಯತೆ ಇದೆ. ಹೀಗಾಗಿ, ಈ ಪ್ರದೇಶಗಳಲ್ಲಿ ಈಗಾಗಲೇ ಭೂಮಿ ಬೆಲೆ ಹಾಗೂ ಆಸ್ತಿಗಳ ಬೆಲೆ ಭರ್ಜರಿ ಹೆಚ್ಚಳವಾಗುವುದಕ್ಕೆ ಶುರುವಾಗಿದೆ.
ಯಾವುದು ಆ ಮೂರು ಪಾಲಿಕೆ: ಬೆಂಗಳೂರನ್ನು ವಿಭಜನೆ ಮಾಡಿ 5ರಿಂದ 7 ಪಾಲಿಕೆಗಳನ್ನು ಮಾಡಬೇಕು ಎಂದು ಶಿಫಾರಸ್ಸು ಮಾಡಲಾಗಿತ್ತು. ಆದರೆ, ಸರ್ಕಾರವು ಮೊದಲ ಹಂತದಲ್ಲಿ ಮೂರು ಪಾಲಿಕೆಗಳನ್ನು ಮಾಡಲು ನಿರ್ಧರಿಸಿದೆ ಎಂದು ಹೇಳಲಾಗಿದೆ. ಅದರಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ದಕ್ಷಿಣ ನಗರ ಪಾಲಿಕೆಗಳನ್ನು ರಚಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬೆಂಗಳೂರಿನ ಪ್ರದೇಶಗಳ ಹೆಸರಿನಲ್ಲಿ ಮಹತ್ವದ ಬದಲಾವಣೆ ಕಡಿಮೆ ಎನ್ನಲಾಗಿದೆ.
2025ರ ವರ್ಷಾಂತ್ಯಕ್ಕೆ ಗ್ರೇಟರ್ ಬೆಂಗಳೂರು ಚುನಾವಣೆ : ರಾಮಲಿಂಗಾ ರೆಡ್ಡಿ ಹೇಳಿಕೆ


