BBMP
Loading ...

V Somanna

ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪ್ರಚಂಡ ಗೆಲುವು ದಾಖಲಿಸಿದ ಮಾಜಿ ಸಚಿವ ವಿ. ಸೋಮಣ್ಣ ಅವರು ಇಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿರುವ ನಂಜಾವಧೂತ ಸ್ವಾಮೀಜಿ ಅವರನ್ನು ಭೇಟಿಯಾದರು.

ತಮ್ಮ ಬೆಂಬಲಿಗರೊಂದಿಗೆ ಮಠಕ್ಕೆ ಭೇಟಿ ನೀಡಿದ ಸೋಮಣ್ಣ, ಸ್ವಾಮೀಜಿ ಅವರ ಜತೆ ಉಭಯ ಕುಶಲೋಪರಿ ನಡೆಸಿದರು ಮತ್ತು ಆಶೀರ್ವಾದ ಪಡೆದರು. ಲೋಕಸಭಾ ಚುನಾವಣೆಯಲ್ಲಿ ಗೆದ್ದಿದ್ದಕ್ಕೆ ಸೋಮಣ್ಣ ಅವರನ್ನು ನಂಜಾವಧೂತ ಸ್ವಾಮೀಜಿ ಅಭಿನಂದಿಸಿದರು.

ಅಂದಹಾಗೆ ಬಿಜೆಪಿಯ ವಿ ಸೋಮಣ್ಣ 72046 ಮತ ಗಳಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ 545352 ಗಳಿಸಿದ್ದಾರೆ, ಬಿಜೆಪಿ ಅಭ್ಯರ್ಥಿ 175594 ಗಳ ಅಂತರದಿಂದ ಗೆಲ್ಲುವ ಮೂಲಕ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಹೊಸ ದಾಖಲೆ ಬರೆದಿದ್ದಾರೆ.

ಗೆಲುವಿನ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ್ದ ವಿ. ಸೋಮಣ್ಣ ಅವರು, ತುಮಕೂರು ಕ್ಷೇತ್ರದಲ್ಲಿ ಬಿಜೆಪಿಗಿಂತಲೂ ಜೆಡಿಎಸ್‌ನವರು ಹೆಚ್ಚಿನದಾಗಿ ಕೆಲಸ ಮಾಡಿದ್ದಾರೆ. ದೇವೇಗೌಡರು, ಕುಮಾರಸ್ವಾಮಿ ನಾಲ್ಕೈದು ಬಾರಿ ಬಂದು ನನಗೆ ದೊಡ್ಡ ಶಕ್ತಿ ನೀಡಿದರು. ಅವರಿಗೆ ನಾನು ಯಾವತ್ತು ಖುಣಿಯಾಗಿದ್ದೇನೆ ಎಂದರು.

ಜೆಡಿಎಸ್ ಮತ್ತು ಬಿಜೆಪಿಯ ಈ ಸಮನ್ವಯತೆ ರಾಜ್ಯದಲ್ಲಿ ಮುಂದಿನ ದಿನಗಳಲ್ಲೂ ಇದೇ ರೀತಿ ಮುಂದುವರೆಯುತ್ತದೆ. ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ. ಹನ್ನೊಂದು ತಿಂಗಳು ಒಂದು ರೀತಿ ವನವಾಸದಲ್ಲಿದೆ. ಸದಾ ಕೆಲಸ ಮಾಡುವವನಿಗೆ ಕೆಲಸವೇ ಇಲ್ಲದಂತಾಗಿತ್ತು. ಈಗ ಅದು ಮುಕ್ತಯವಾಗಿದೆ ಎಂದು ತಿಳಿಸಿದರು.

ಕೇಂದ್ರದಲ್ಲಿ ಸರಕಾರ ರಚನೆ ಪ್ರಯತ್ನ ಕೈಬಿಟ್ಟ ಇಂಡಿಯಾ ಒಕ್ಕೂಟ

Leave a Reply

Your email address will not be published. Required fields are marked *