BBMP
Loading ...

DK Suresh

ಬೆಂಗಳೂರು: ಐಶ್ವರ್ಯ ಗೌಡ ಪ್ರಕರಣದ ತನಿಖೆಯು ಇದೀಗ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ಜಾರಿ ನಿರ್ದೇಶನಾಲಯ (ಇ.ಡಿ) ಸಂಸದ ಡಿ.ಕೆ. ಸುರೇಶ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚಿಸಿದ ಆರೋಪ ಹೊತ್ತ ಐಶ್ವರ್ಯ ಗೌಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಇಡಿ ಸಮನ್ಸ್ ನೀಡಿದೆ.

ಜೂನ್ 19 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದು, ಜೂನ್ 23 ರಂದು ವಿಚಾರಣೆಗೆ ಬರುವುದಾಗಿ ಡಿಕೆ ಸುರೇಶ್ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರಿ ಎಂದು ಹೇಳಿಕೊಂಡು ಕೋಟ್ಯಂತರ ರೂಪಾಯಿ ಚಿನ್ನ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಆರೋಪಿ ಮನೆ ಮೇಲೆ ದಾಳಿ ನಡೆಸಿ ಐಶ್ವರ್ಯಾ ಗೌಡ ಅವರನ್ನು ವಶಕ್ಕೆ ಪಡೆದಿದ್ದರು.

ಕಾಂಗ್ರೆಸ್ ಮಾಜಿ ಸಂಸದ ಡಿ.ಕೆ.ಸುರೇಶ್​ ಸಹೋದರಿ ಎಂದು ಹೇಳಿಕೊಂಡು ಐಶ್ವರ್ಯ ಗೌಡ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚಿಸಿರುವ ಆರೋಪ ಕೇಳಿ ಬಂದಿತ್ತು. ಹೀಗಾಗಿ ಐಶ್ವರ್ಯ ಗೌಡ ಹೇಳಿಕೆ ಹಾಗೂ ಸಾಕ್ಷಿಗಳ ಆಧರಿಸಿ ಮಾಜಿ ಸಂಸದ ಡಿ.ಕೆ.ಸುರೇಶ್​ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿದೆ.

ಬೆಂಗಳೂರಿನಲ್ಲಿ ನಕ್ಷೆ ಉಲ್ಲಂಘಿಸಿ ನಿರ್ಮಿಸಿರುವ ಕಟ್ಟಡಗಳ ಮಾಲೀಕರಿಗೆ ಬಿಬಿಎಂಪಿ ಶಾಕ್‌! ಹೆಚ್ಚುವರಿ ಭಾಗ ನೆಲಸಮ

Leave a Reply

Your email address will not be published. Required fields are marked *