BBMP
Loading ...

ಬೆಂಗಳೂರು: ಬ್ಯಾಟರಾಯನಪುರ ಠಾಣೆಯಲ್ಲಿ ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಇನ್ಸ್​ಪೆಕ್ಟರ್ ವಿರುದ್ಧ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು ಗೊಳಿಸಿ ಹೈಕೋರ್ಟ್ ಆದೇಶಿಸಿದೆ.

ಈ ಮೂಲಕ ಇನ್ಸ್​ಪೆಕ್ಟರ್ ಶಂಕರ್ ನಾಯ್ಕ್ ಸಂಕಷ್ಟ ಎದುರಾಗಿದೆ. ಕರ್ತವ್ಯದ ವೇಳೆ ಕಳ್ಳತನ ಪ್ರಕರಣವೊಂದರಲ್ಲಿ 72 ಲಕ್ಷ ರೂಪಾಯಿ ಜಪ್ತಿ ಮಾಡಿದ್ದ ಪೊಲೀಸ್​ ಶಂಕರ್ ನಾಯ್ಕ್, ಈ ಹಣವನ್ನು ಸರ್ಕಾರದ ಖಜಾನೆ ಅಥವಾ ಠಾಣೆಯ ಸುಪರ್ದಿಗೆ ಕೊಡದೆ ಸ್ವಂತಕ್ಕೆ ಬಳಸಿಕೊಂಡ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬ್ಯಾಟರಾಯನಪುರ ಠಾಣೆಯಲ್ಲಿ ಶಂಕರ್ ಹಾಗೂ ಮಧ್ಯವರ್ತಿ ಲೋಕನಾಥ್ ವಿರುದ್ಧ ಎಸಿಪಿ ಭರತ್ ರೆಡ್ಡಿ ನೀಡಿದ್ದ ದೂರು ಆಧರಿಸಿ 2023ರ ನವೆಂಬರ್​ನಲ್ಲಿ ಎಫ್​ಐಆರ್​ ದಾಖಲಾಗಿತ್ತು.

ಎಫ್​ಐಆರ್​ ದಾಖಲಾಗುತ್ತಿದ್ದಂತೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿಸಲಾಗಿತ್ತು. ಬಳಿಕ ಪ್ರಕರಣ ರದ್ದು ಕೋರಿ ಇನ್ಸ್​ಪೆಕ್ಟ್​ರ್​ ಶಂಕರ್ ನಾಯ್ಕ್ ಹೈಕೋರ್ಟ್ ಮೆಟ್ಟಲೇರಿದ್ದರು. ನಂತರ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ ನೀಡಿತ್ತು. ಆದರೆ, ತಡೆಯಾಜ್ಞೆ ತೆರವುಗೊಳಿಸುವಂತೆ ಸಿಸಿಬಿ ಮೇಲ್ಮನವಿ ಸಲ್ಲಿಸಿತ್ತು. ಈ ಹಿನ್ನೆಲೆ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಇದೀಗ ಹೈಕೋರ್ಟ್ ತೆರವುಗೊಳಿಸಿದೆ.

ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದು ನಾಯಿ ಮಾಂಸ ಅಲ್ಲ, ಕುರಿ ಮಾಂಸ; ಹೈದರಾಬಾದ್‌ ಲ್ಯಾಬ್‌ ವರದಿ!

Leave a Reply

Your email address will not be published. Required fields are marked *