BBMP
Loading ...

Muniratna new

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಜೈಲು ಸೇರಿದ್ದಾರೆ. ಇತ್ತ ಮುನಿರತ್ನ ಬೆಂಬಲಿಗರು ಸಾಕ್ಷಿಗಳಿಗೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಮುನಿರತ್ನ ಅವರ ವಿರುದ್ಧ ಸಾಕ್ಷಿ ಹೇಳಿದರೆ ಮನೆಗೆ ಬೆಂಕಿ ಹಚ್ಚುತ್ತೇವೆ.

ನಿಮ್ಮ ವಂಶವೇ ಇರದಂತೆ ಮಾಡುತ್ತೇವೆಂದು ಸಾಕ್ಷಿಗಳ ಮನೆಗೆ ನುಗ್ಗಿ ಬಿಜೆಪಿ ಕಾರ್ಯಕರ್ತೆ ಸುನಂದಮ್ಮ ಮತ್ತು ಮುನಿರತ್ನ ಬೆಂಬಲಿಗರು ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆಯ ಪುತ್ರ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೂ ಮುನಿರತ್ನ ವಿರುದ್ಧ ಜಾತಿನಿಂದನೆ, ಜೀವಬೆದರಿಕೆ, ಅತ್ಯಾಚಾರ ಕೇಸ್ ದಾಖಲಾಗಿದೆ. ಇದೀಗ ಈ ಎಲ್ಲಾ ಕೇಸ್‌ಗಳ ತನಿಖೆ ನಡೆಸಲು ಸಿಐಡಿ ಅಪರ ಪೋಲಿಸ್ ಮಹಾನಿರ್ದೇಶಕ ಬಿ.ಕೆ ಸಿಂಗ್‌ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚನೆಯಾಗಿದೆ. ಈ ತಂಡದಲ್ಲಿ ಸದಸ್ಯರಾಗಿರುವ ಕೇಂದ್ರ ವಲಯ ಪೋಲಿಸ್ ಮಹಾನಿರೀಕ್ಷಕ ಲಭೂರಾಮ್, ರೈಲ್ವೇಸ್ ಪೋಲಿಸ್ ಅಧೀಕ್ಷಕಿ ಸೌಮ್ಯಲತಾ ಹಾಗೂ ಪೋಲಿಸ್ ಅಧೀಕ್ಷಕ ಸೈಮನ್ ಕೂಡ ಇದ್ದಾರೆ.

ಬೆಸ್ಕಾಂ ಬಿಲ್​ನಲ್ಲಿ ಬಿಬಿಎಂಪಿ ವ್ಯಾಪ್ತಿಯ ಆಸ್ತಿಗಳ ಗುರುತಿನ ಸಂಖ್ಯೆ ನಮೂದು

Leave a Reply

Your email address will not be published. Required fields are marked *