BBMP
Loading ...

Greater Bengaluru News9

Greater Bengaluru News9 : ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಖಾತೆ ಹಂಚಿಕೆ ನಂತರ ಇದೀಗ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ.

ಮೊದಲ ಹಂತದಲ್ಲಿ ಡಿಕೆಶಿ ಸಂಪುಟ ಸೇರಿದ 13 ಸಚಿವರಿಗೆ ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ಕೊಠಡಿ ಹಂಚಿಕೆ ಮಾಡಿ ಸೋಮವಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.

ಖಾತೆ ಹಂಚಿಕೆ ವಿಚಾರದಲ್ಲಿ ಮುನಿಸಿಕೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಳಿಕ ವಾಪಸ್ ಪಡೆದ ಜಲಸಂಪನ್ಮೂಲ ಖಾತೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸಿಎಂ ಡಿಕೆ ಶಿವಕುಮಾರ್ ಅವರು ಬಂಪರ್ ಗಿಫ್ಟ್ ನೀಡಿದ್ದು, ಬರೋಬ್ಬರಿಗೆ ನಾಲ್ಕು ಕೊಠಡಿಗಳನ್ನು ನೀಡಲಾಗಿದೆ.

ಹೌದು, ರಾಮಲಿಂಗಾರೆಡ್ಡಿ ಅವರಿಗೆ ವಿಧಾನಸೌಧದಲ್ಲಿ 335, 336, 337, 337A ಕೊಠಡಿಗಳ ಹಂಚಿಕೆ ಮಾಡಲಾಗಿದೆ. ಈ ಮೂಲಕ ಅವರನ್ನು ಸಮಾಧಾನಪಡಿಸುವ ಪ್ರಯತ್ನ ಇದಾಗಿದೆ ಎನ್ನಲಾಗಿದೆ.

ಈ ಹಿಂದೆ ಡಿಸಿಎಂ ಆಗಿದ್ದಾಗ ಡಿ‌.ಕೆ.ಶಿವಕುಮಾರ್ ಬಳಸುತ್ತಿದ್ದ ಕಚೇರಿಯನ್ನು ಸಿಎಂ ಕಚೇರಿಯಂತೆ ನವೀಕರಣ ಮಾಡಿಸಿದ್ದರು. ಈಗ ಅದೇ ಕೊಠಡಿಗಳನ್ನು ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಹಂಚಿಕೆ ಮಾಡಲಾಗಿದೆ.

ಯಾರಿಗೆ ಯಾವ ಕೊಠಡಿ?

  • ಪರಮೇಶ್ವರ್ ಉಪ ಮುಖ್ಯಮಂತ್ರಿ (ಕಂದಾಯ ಮತ್ತು ಯುವಸಬಲೀಕರಣ) – ವಿಧಾನಸೌಧ 327/327a
  • ಕೆ.ಎಚ್ ಮುನಿಯಪ್ಪ, (ಆಹಾರ ಸಚಿವ)- ವಿಧಾನಸೌಧ – 340a/341/341a
  • ಕೆಜೆ ಜಾರ್ಜ್ (ಇಂಧನ ಮತ್ತು ಪ್ರವಾಸೋದ್ಯುಮ) – ವಿಧಾನಸೌಧ, 317/317a
  • ಎಂಬಿ ಪಾಟೀಲ್, (ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ) – ವಿಧಾನಸೌಧ – 344/344a
  • ರಾಮಲಿಂಗಾರೆಡ್ಡಿ, (ಜಲಸಂಪನ್ಮೂಲ ಸಚಿವ) – ವಿಧಾನಸೌಧ, 335/336/337/337a
  • ಸತೀಶ್ ಜಾರಕಿಹೊಳಿ, (ಲೋಕೋಪಯೋಗಿ ಸಚಿವ) – ವಿಕಾಸಸೌಧ, 444/445
  • ಕೃಷ್ಣ ಬೈರೇಗೌಡ, ಸಚಿವ -(ಬೆಂಗಳೂರು ನಗರಾಭಿವೃದ್ಧಿ ಸಚಿವ) ವಿಕಾಸಸೌಧ, 244/245
  • ಪ್ರಿಯಾಂಕ್ ಖರ್ಗೆ, (ಗೃಹ ಇಲಾಖೆ ಮತ್ತು ಐಟಿಬಿಟಿ) – ವಿಕಾಸ ಸೌಧ, 242, 243
  • ಯುಟಿ ಖಾದರ್, (ಆರೋಗ್ಯ ಸಚಿವ) – ವಿಧಾನಸೌಧ, 315/315a
  • ಈಶ್ವರ್ ಖಂಡ್ರೆ, (ಗ್ರಾಮೀಣಾಭಿವೃದ್ಧಿ ಸಚಿವ) – ವಿಕಾಸಸೌಧ, 36/37
  • ಯತೀಂದ್ರ ಸಿದ್ದರಾಮಯ್ಯ, (ನಗರಾಭಿವೃದ್ಧಿ ಸಚಿವ) – ವಿಧಾನಸೌಧ, 314/314a
  • ಶರಣಪ್ರಕಾಶ್ ಪಾಟೀಲ್, (ವೈದ್ಯಕೀಯ ಶಿಕ್ಷಣ ಸಚಿವ) – ವಿಕಾಸಸೌಧ. 344/345
  • ಬೈರತಿ ಸುರೇಶ್, (ಸಾರಿಗೆ ಸಚಿವ) – ವಿಧಾನಸೌಧ, 316/316a

Leave a Reply

Your email address will not be published. Required fields are marked *