ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಿಯಕೃಷ್ಣ ಅವರ ಹುಟ್ಟು ಹಬ್ಬದ ಪ್ರಯುಕ್ತ RPC ಲೇಔಟಿನ ಪ್ರವೀಣ್ ಜುವೆಲ್ಸ್ ವತಿಯಿಂದ ಅನ್ನದಾನ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಪ್ರವೀಣ್ ಜ್ಯೂವೆಲರ್ಸ್ ಮಾಲೀಕರಾದ ಪ್ರವೀಣ್ ಘನ ಹಾಗೂ ಬಿಬಿಎಂಪಿ ನ್ಯೂಸ್ ಎಡಿಟರ್ ವೈಎಚ್ ಆನಂದ್ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಹಿನ್ನಲೆಯಲ್ಲಿ ಶಾಸಕ ಪ್ರಿಯಕೃಷ್ಣ ಅವರು ಹುಟ್ಟುಹಬ್ಬ ಆಚರಣೆಗೆ ಬ್ರೇಕ್ ಹಾಕಿದ್ದಾರೆ. ಆದರೂ ಅಭಿಮಾನಿಗಳು ಹಾಗೂ ಹಿತೈಶಿಗಳು ಸರಳವಾಗಿ ಆಚರಣೆ ಮಾಡಿದ್ದಾರೆ.


