BBMP
Loading ...

Greater Bengaluru News9: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಿಯಕೃಷ್ಣ ಅವರ ಹುಟ್ಟು ಹಬ್ಬದ ಪ್ರಯುಕ್ತ RPC ಲೇಔಟಿನ ಪ್ರವೀಣ್ ಜುವೆಲ್ಸ್ ವತಿಯಿಂದ ಅನ್ನದಾನ ಕಾರ್ಯಕ್ರಮ ನಡೆಸಲಾಯಿತು.

ಸಂದರ್ಭದಲ್ಲಿ ಪ್ರವೀಣ್ ಜ್ಯೂವೆಲರ್ಸ್ ಮಾಲೀಕರಾದ ಪ್ರವೀಣ್ ಘನ ಹಾಗೂ ಬಿಬಿಎಂಪಿ ನ್ಯೂಸ್ ಎಡಿಟರ್ ವೈಎಚ್ ಆನಂದ್ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಹಾಗೂ ಸರಳ ಸಜ್ಜನಿಕೆಯ ರಾಜಕಾರಣಿ ಎಂದೇ ಗುರುತಿಸಿಕೊಂಡಿರುವ ಪ್ರಿಯಕೃಷ್ಣ ಅವರು ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಯುವ ನಾಯಕತ್ವ ಮತ್ತು ಅಭಿವೃದ್ಧಿ ಪರ ಚಿಂತನೆಗೆ ಹೆಸರಾಗಿರುವ ಅವರಿಗೆ ಶ್ರೀ ಗುರುಗುಂಡ ಬ್ರಹ್ಮೇಶ್ವರ ಮಠದ (ಸ್ಪಟಿಕಪುರಿ ಮಹಾಸಂಸ್ಥಾನ) ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ನಂಜಾವಧೂತ ಮಹಾಸ್ವಾಮೀಜಿ, ಕ್ಷೇತ್ರದ ಜನತೆ ಹಾಗೂ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಅಲ್ಲದೆ, ಬಿಬಿಎಂಪಿ ನ್ಯೂಸ್​9 ಸಂಪದಾಕರು ಹಾಗೂ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್​ ಗುತ್ತಿಗೆದಾರರ ಸಂಘದ ಹೋರಾಟ ಸಮಿತಿಯ ಚೇರ್ಮನ್​ ವೈ.ಎಚ್​. ಆನಂದ್​ ಶುಭಕೋರಿದ್ದಾರೆ.

ಪ್ರಿಯಕೃಷ್ಣ ಅವರು ರಾಜಕೀಯವನ್ನು ಕೇವಲ ಅಧಿಕಾರವಾಗಿ ನೋಡದೆ, ಅದನ್ನೊಂದು ಜನಸೇವೆಯ ಮಾಧ್ಯಮವನ್ನಾಗಿ ಮಾಡಿಕೊಂಡವರು. ಹಿರಿಯ ನಾಯಕ ಎಂ. ಕೃಷ್ಣಪ್ಪ ಅವರ ಮಾರ್ಗದರ್ಶನದಲ್ಲಿ ಬೆಳೆದು ಬಂದ ಇವರು, ಅತ್ಯಂತ ಕಿರಿಯ ವಯಸ್ಸಿನಲ್ಲೇ ಶಾಸಕರಾಗಿ ಆಯ್ಕೆಯಾಗಿ ಸೈ ಎನಿಸಿಕೊಂಡವರು. ಕ್ಷೇತ್ರದ ಪ್ರತಿಯೊಬ್ಬ ನಾಗರಿಕನ ಕಷ್ಟ-ಸುಖಗಳಿಗೆ ಸ್ಪಂದಿಸುವ ಅವರ ಗುಣ, ಯುವ ಪೀಳಿಗೆಗೆ ಮಾದರಿಯಾಗಿದೆ.

Leave a Reply

Your email address will not be published. Required fields are marked *