ಬೆಳಗಾವಿ: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಬೆಳಗಾವಿ ಜಿಲ್ಲಾ ಸಮಿತಿಯ ವಾರ್ಷಿಕ ಸಭೆಯು ಸಮಿತಿಯ ಅಧ್ಯಕ್ಷ ಹರೀಶ್ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು.

ವಾರ್ಷಿಕ ಸಭೆಯನ್ನು ಮೋನಿಕ ಮಂಗಲ್ ಮಹಾಸಭೆಯಲ್ಲಿ ಏರ್ಪಡಿಸಲಾಗಿತ್ತು. ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಸಿ. ರಮೇಶ್ ಕೂಡ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಸಮಿತಿಯ ವಾರ್ಷಿಕ ಸಭೆ ಅಂಗವಾಗಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಯಿತು.

ಸಮಿತಿಯ ಎಲ್ಲ ಪದಾಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿ, ರಕ್ತದಾನ ಮಾಡುವ ಮೂಲಕ ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ಮೆರೆದರು.
ರಸ್ತೆ ಬದಿ ವ್ಯಾಪಾರಿಗಳೂ UPI ಪಾವತಿ ಸ್ವೀಕರಿಸ್ತಾರೆ? ಬೆಸ್ಕಾಂಗೆ ಏನಾಗಿದೆ? ಹೈಕೋರ್ಟ್ ಕ್ಲಾಸ್


