BBMP
Loading ...

ಬಳ್ಳಾರಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ಬೆನ್ನಲ್ಲೇ ನಟ ದರ್ಶನ್ ವಿರುದ್ಧ ಇದೀಗ ಮತ್ತೊಂದು ದೂರು ದಾಖಲಾಗಿದೆ.

ಹೌದು, ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ವಿಚಾರ ಸಂಬಂಧ ನಟ ದರ್ಶನ್ ವಿರುದ್ಧ ಈಗಾಗಲೇ ಮೂರು ಪ್ರಕರಣಗಳು ದಾಖಲಾಗಿದ್ದು, ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ. ಈ ಮೂಲಕ ದರ್ಶನ್ ಗೆ ಬಿಟ್ಟುಬಿಡದೇ ಸಂಕಷ್ಟ ಎದುರಾಗಿದೆ.

ರೌಡಿ ಶೀಟರ್ ಬೇಕರಿ ರಘು ಜೊತೆಗೆ ಬೆಡ್ ಮೇಲೆ ಕುಳಿತಿದ್ದ ದರ್ಶನ್ ಅವರ ಫೋಟೋ ವೈರಲ್ ಆಗಿತ್ತು ಈ ಹಿನ್ನೆಲೆಯಲ್ಲಿ ಆ ಫೋಟೋಗೆ ಸಂಬಂಧಿಸಿದಂತೆ ದೂರು ದಾಖಲಿಸಲಾಗಿದೆ. ಜೈಲು ಅಧಿಕಾರಿಗಳು ಈ ಕುರಿತು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದ್ರೆ ಈ ದೂರಿಗೆ ಪ್ರತ್ಯೇಕ ಎಫ್‌ಐಆರ್ ದಾಖಲಿಸಿಲ್ಲ. ಬದಲಾಗಿ ದರ್ಶನ್ ವಿರುದ್ಧ ಈಗಾಗಲೇ ಪರಪ್ಪನ ಅಗ್ರಹಾರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಈ ದೂರನ್ನು ಸೇರಿಸಿಕೊಂಡು ತನಿಖೆ ನಡೆಸಲು ಸೂಚನೆ ನೀಡಲಾಗಿದೆ.

ಇಂಜಿನಿಯರ್​ ಸ್ಥಾನಕ್ಕೆ ಪವರ್ ಮ್ಯಾನ್​ ನಿಯೋಜನೆ: ವಿವಾದಕ್ಕೆ ಗುರಿಯಾದ ಬೆಸ್ಕಾಂ ಆದೇಶ

Leave a Reply

Your email address will not be published. Required fields are marked *