BBMP
Loading ...

DKS

Geater Bengaluru News9 : ಬೆಂಗಳೂರಿನ ಆಸ್ತಿದಾರರಿಗೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಆಸ್ತಿಗಳ ಪರಿವರ್ತನೆಯಲ್ಲಿ ಎದುರಾಗಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದಕ್ಕೆ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಡಿ.ಕೆ ಶಿವಕುಮಾರ್ ಅವರು ಗುಡ್‌ನ್ಯೂಸ್ ಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿ ಬಿ ಖಾತಾದಿಂದ ಎ ಖಾತಾ ಆಸ್ತಿ ಪರಿವರ್ತನೆಯಲ್ಲಿ ಭಾರೀ ಸಮಸ್ಯೆ ಎದುರಾಗಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರವು ಬಿ ಖಾತಾದಿಂದ ಎ ಖಾತಾ ಪರಿವರ್ತನೆಗೆ ಅವಕಾಶ ಮಾಡಿಕೊಟ್ಟಿದೆಯಾದರೂ, ಖಾತಾ ಪರಿವರ್ತನೆ ವಿಳಂಬ ಹಾಗೂ ಗೈಡ್‌ಲೈನ್ ವ್ಯಾಲ್ಯೂವ್‌ನ ಮೇಲೆ ಭಾರೀ ಮೊತ್ತ ನಿಗದಿ ಮಾಡಿರುವುದು ಸಮಸ್ಯೆ ಆಗುತ್ತಿದೆ. ಇದೀಗ ಕಾಲ ಮಿತಿಯಲ್ಲಿ ಬಿ ಖಾತಾದಿಂದ ಎ ಖಾತಾ ಪರಿವರ್ತನೆಗೆ ಗಡುವು ನಿಗದಿ ಮಾಡಲಾಗಿದೆ. ಇದರ ಸಂಪೂರ್ಣ ವಿವರ ಈ ಲೇಖನದಲ್ಲಿದೆ.

15 ದಿನಗಳಲ್ಲಿ ಸಿಗಲಿದೆ ಬಿ ಖಾತಾ
ಬಿ ಖಾತಾದಿಂದ ಎ ಖಾತಾ ಪರಿವರ್ತನೆ ವಿಚಾರದಲ್ಲಿ 7 ಸಾವಿರ ಜನರು ಅರ್ಜಿ ನೀಡಿದ್ದು, ಅವರು ನಕ್ಷೆ ನೀಡಬೇಕಿತ್ತು. ಈಗ ನಮ್ಮ ಅಧಿಕಾರಿಗಳೇ ಸ್ಥಳಕ್ಕೆ ಹೋಗಿ ನಕ್ಷೆ ರೂಪಿಸುವ ಕೆಲಸ ಮಾಡಬೇಕು. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳ ವ್ಯಾಪ್ತಿಯಲ್ಲಿ 15 ದಿನಗಳಲ್ಲಿ ಬಿ ಖಾತಾದಿಂದ ಎ ಖಾತಾ ಅನುಮೋದನೆ ನೀಡಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಇನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ 300 ಅರ್ಜಿಗಳನ್ನು ನಕ್ಷೆ ಹೊರತಾಗಿಯೂ ಅನುಮೋದನೆ ಮಾಡಲಾಗಿದೆ. ನಕ್ಷೆ ಒದಗಿಸುಲು ಆಗದವರಿಗೆ 15 ದಿನಗಳಲ್ಲಿ ಆನ್‌ಲೈನ್ ಶುಲ್ಕ ಕಟ್ಟಿಸಿಕೊಂಡು ಖಾತಾ ಬದಲಾವಣೆ ಮಾಡಲು ನಿರ್ಧರಿಸಿದ್ದೇವೆ. 1.02 ಲಕ್ಷ ಅರ್ಜಿಗಳ ಪೈಕಿ 56 ಸಾವಿರ ಅರ್ಜಿಗಳು ಅನುಮೋದನೆ ಪಡೆದಿದ್ದು, 45 ಸಾವಿರ ಅರ್ಜಿಗಳು ವಜಾಗೊಂಡಿವೆ. ವಜಾಗೊಂಡ ಅರ್ಜಿಗಳನ್ನು ಮತ್ತೆ ಪರಿಶೀಲಿಸಿ ವಜಾ ಮಾಡುವುದಕ್ಕೆ ಕಾರಣ ಪತ್ತೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮಾಹಿತಿ ನೀಡಿದ್ದಾರೆ.

ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ಪಾಲಿಕೆಗಳ ವ್ಯಾಪ್ತಿಯಲ್ಲಿ 15 ದಿನಗಳಲ್ಲಿ ಬಿ ಖಾತಾಯಿಂದ ಎ ಖಾತಾ ಅನುಮೋದನೆ ಮಾಡಬೇಕು ಎಂದು ಸೂಚಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *