BBMP
Loading ...

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್​ರನ್ನು ಪ್ರಕರಣದಿಂದ ಬಚಾವ್​ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಪ್ರಭಾವಿ ರಾಜಕಾರಣಿಗಳು ಸಾಕಷ್ಟು ಒತ್ತಡ ಹಾಕುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಕೊಲೆ ಪ್ರಕರಣದಲ್ಲಿ ದರ್ಶನ್​ರನ್ನು ಬಿಡುಗಡೆ ಮಾಡಲು ತೆರೆಮರೆಯಲ್ಲಿ ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ ಎಂಬ ಗುಮಾನಿಯು ಇದೆ. ಪ್ರಭಾವಿ ರಾಜಕಾರಣಿಗಳು ದರ್ಶನ್​ ಪರ ನಿಂತ್ರಾ? ಇಡೀ ತನಿಖೆಯ ದಿಕ್ಕನ್ನು ತಪ್ಪಿಸಲು ಪ್ರಯತ್ನ ನಡೆಸುತ್ತಿದ್ದಾರಾ? ರಾಜಕಾರಣಿಗಳ ಪ್ರಭಾವಕ್ಕೆ ಸಿಎಂ ಸಿದ್ದರಾಮಯ್ಯ ಕ್ಯಾರೆ ಎಂದಿಲ್ಲ ಎನ್ನಲಾಗುತ್ತಿದೆ. ಅಲ್ಲದೆ, ಈ ಪ್ರಕರಣದಿಂದ ಅಂತರ ಕಾಯ್ದುಕೊಳ್ಳಲು ಮತ್ತು ಮಾಧ್ಯಮಗಳ ಮುಂದೆ ಮಾತನಾಡದಿರಲು ತಮ್ಮ ರಾಜಕಾರಣಿಗಳಿಗೆ ಸಿಎಂ ಖಡಕ್​ ಸೂಚನೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಮತ್ತೊಂದು ಭಯಾನಕ ಸಂಗತಿ ಇದೀಗ ಹೊರಬಿದ್ದಿದ್ದು, ರೇಣುಕಸ್ವಾಮಿ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ತಿರುಚಲು ವೈದ್ಯರಿಗೆ 1 ಕೋಟಿ ರೂಪಾಯಿ ಆಫರ್​ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದ್ದು, ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿ ಕೊಡುವಂತೆ ಪ್ರಭಾವಿ ರಾಜಕಾರಣಿಯೊಬ್ಬರು ವೈದ್ಯರಿಗೆ 1 ಕೋಟಿ ರೂಪಾಯಿ ಆಫರ್ ಮಾಡಿದ್ರಾ? ಇಂತದ್ದೊಂದು ಆರೋಪ ಇದೀಗ ಕೇಳಿಬರುತ್ತಿದೆ.

ಹೃದಯಾಘಾತ ಎಂದು ವರದಿ ನೀಡಿದರೆ, ಶವ ಎಸೆದವರನ್ನು ಬಿಟ್ಟು ದರ್ಶನ್​ ಮತ್ತು ಪವಿತ್ರಾ ಈ ಪ್ರಕರಣದಿಂದ ಬಚಾವ್​ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೀಗಾಗಿ ಪ್ರಭಾವಿ ರಾಜಕಾರಣಿ 1 ಕೋಟಿ ರೂ. ಆಫರ್​ ಮಾಡಿದ್ರಾ? ಈ ಸಂಬಂಧ ದೂರು ಕೊಡುವಂತೆ ವೈದ್ಯರಿಗೆ ಹಿರಿಯ ಪೊಲೀಸ್​ ಅಧಿಕಾರಿ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಇದಿಷ್ಟೇ ಅಲ್ಲದೆ, ಪೊಲೀಸರ ತನಿಖೆಯ ಮೇಲೂ ಗುಮಾನಿ ಎದ್ದಿದೆ, ಠಾಣೆಯಲ್ಲಿ ನಡೆಯುವ ಚಟುವಟಿಕೆಗಳು ಹೊರಗಡೆಗೆ ಕಾಣಬಾರದು ಅಂತ ಅನ್ನಪೂರ್ಣೇಶ್ವರಿ ನಗರ ಠಾಣೆಯ ಸುತ್ತ ಶಾಮಿಯಾನ ಅಳವಡಿಸಲಾಗಿದೆ.

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಮತ್ತು ಗೆಳತಿ ಪವಿತ್ರಾ ಗೌಡ ಅರೆಸ್ಟ್​ ಆಗಿರುವ ಸುದ್ದಿ ರಾಜ್ಯದೆಲ್ಲೆಡೆ ಭಾರಿ ಚರ್ಚೆಯಾಗುತ್ತಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದಕ್ಕೆ ರೇಣುಕಸ್ವಾಮಿಯ ಕೊಲೆ ನಡೆದಿದೆ ಎನ್ನಲಾಗಿದೆ. ಇದರಲ್ಲಿ ದರ್ಶನ್​ ಕೈವಾಡ ಇದೆ. ದರ್ಶನ್​ ಸೂಚನೆ ಕೊಟ್ಟಿದ್ದಕ್ಕೆ ಹಲ್ಲೆ ಮಾಡಿದೆವು ಎಂದು ಬಂಧಿತ ಆರೋಪಿಗಳು ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ದರ್ಶನ್​ರನ್ನು ಬಂಧಿಸಲಾಗಿದೆ. ಫೆಬ್ರವರಿ 27ರಿಂದ ದರ್ಶನ್​ ಗೆಳತಿ ಪವಿತ್ರಾ ಗೌಡಗೆ ರೇಣುಕಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್‌ ಬ್ಲಾಕ್‌ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್‌ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್​ಗೆ ಹೇಳಿದ್ದರು. ಈ ವಿಚಾರ ದರ್ಶನ್​ಗೆ ತಿಳಿದಿದೆ. ರೇಣುಕ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್​ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್​, ಹಲ್ಲೆಯಿಂದ ರೇಣುಕಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.

ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ. ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್​ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ.

ಚಿತ್ರಹಿಂಸೆಯಿಂದ ಪ್ರಾಣ ಬಿಟ್ಟ ರೇಣುಕಸ್ವಾಮಿ ಮೃತದೇಹ ಹೇಗಿತ್ತು ಗೊತ್ತಾ? ಇಲ್ಲಿದೆ ನೋಡಿ ಭಯಾನಕ ಸಂಗತಿ

Leave a Reply

Your email address will not be published. Required fields are marked *