ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಹನಿಟ್ರ್ಯಾಪ್ ಸದ್ದು ಮಾಡುತ್ತಿದೆ. ವಿಧಾನಸೌಧದ ಮೊಗಸಾಲೆಯಲ್ಲೂ ಹನಿಟ್ರ್ಯಾಪ್ ಕುರಿತು ಗುಸು ಗುಸು ಚರ್ಚೆಗಳು ನಡೆಯುತ್ತಿವೆ. ಕೆಲವು ಸಚಿವರು ಬಹಿರಂಗವಾದ ಹೇಳಿಕೆ ನೀಡುತ್ತಿದ್ದು, ಪ್ರಭಾವಿ ಸಚಿವರನ್ನೇ ಹನಿಟ್ರ್ಯಾಪ್ ಮಾಡುವ ಪ್ರಯತ್ನ ವಿಫಲಗೊಂಡಿದೆ ಎಂಬ ಸುದ್ದಿಗಳೂ ಹರಿದಾಡುತ್ತಿವೆ.
ಹೌದು ಭಾವಿ ಸಚಿವರಿಗೆ ಹನಿಟ್ರ್ಯಾಪ್ ಯತ್ನ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಪ್ರಭಾವಿ ಸಚಿವರಿಗೆ ಹನಿಟ್ರ್ಯಾಪ್ಗೆ ಪ್ರಯತ್ನ ನಡೆದಿದ್ಯಂತೆ.. ಸ್ವಲ್ಪ ಯಾಮಾರಿದ್ರೂ ಚಾರಿತ್ರ್ಯವಧೆ ಆಗ್ತಿತ್ತು. ತುಮಕೂರು ಭಾಗದ ಸಚಿವರಿಗೆ ಒಂದು ಟೀಂ ಹನಿಟ್ರ್ಯಾಪ್ಗೆ ಪ್ರಯತ್ನ ಮಾಡಿದೆ. ಆದ್ರೆ ಹನಿಟ್ರ್ಯಾಪ್ಗೆ ಬಂದಿದ್ದ ಟೀಂಗೆ, ಸಚಿವರು ಶಾಕ್ ಕೊಟ್ಟು, ವಾರ್ನಿಂಗ್ ಮಾಡಿ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೂ ತುಮಕೂರು ಭಾಗದ ಸಚಿವರಿಗೆ ಹನಿಟ್ರ್ಯಾಪ್ ಆರೋಪದ ಬಗ್ಗೆ ಸಚಿವ ಬೈರತಿ ಸುರೇಶ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಹನಿಟ್ರ್ಯಾಪ್ ಮಾಡುವವರಿಗೆ ಯಾವುದೇ ಕ್ಷಮೆ ಇಲ್ಲ. ಯಾರಾದರು ಹನಿಟ್ರ್ಯಾಪ್ ಮಾಡಿದ್ರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಇದುವರೆಗೂ ಯಾವುದೇ ಹನಿಟ್ರ್ಯಾಪ್ ನಡೆದಿಲ್ಲ. ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ಪೊಲೀಸರು ನೋಡಿಕೊಳ್ಳುತ್ತಾರೆ ಎಂದರು.
ತಮ್ಮದೇ ಪಕ್ಷದ ಪ್ರಭಾವಿ ನಾಯಕ ಸಚಿವರೊಬ್ಬರನ್ನು ಹನಿಟ್ರ್ಯಾಪ್ ಗೆ ಒಳಪಡಿಸುವ ಪ್ರಯತ್ನ ನಡೆಸಲಾಗಿದೆ ಎಂಬುದು ಕಾಂಗ್ರೆಸ್ನಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಈ ಸಂಬಂಧ ವಿಧಾನಸೌಧದ ಮೊಗಸಾಲೆಯಲ್ಲೂ ಶಾಸಕರು-ಸಚಿವರ ನಡುವೆ ಹನಿಟ್ರ್ಯಾಪ್ ಕುರಿತು ಗುಸು ಗುಸು ಚರ್ಚೆಗಳು ನಡೆಯುತ್ತಿವೆ.


