ಬೆಂಗಳೂರಿನ ಜನರ ಸಮಸ್ಯೆಯನ್ನು ತಪ್ಪಿಸುವುದಕ್ಕೆ ಕೊನೆಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತರು ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ಕಳೆದ 5 ವರ್ಷಗಳಿಂದ ಚುನಾವಣೆ ನಡೆದಿಲ್ಲ. 5 ವರ್ಷಗಳಿಂದ ಚುನಾವಣೆ ನಡೆಯದೆ ಬೆಂಗಳೂರಿನ ಪಾಲಿಕೆ ವ್ಯಾಪ್ತಿಯಲ್ಲಿ ಭಾರೀ ಸಮಸ್ಯೆಗಳು ಎದುರಾಗಿವೆ. ಅಲ್ಲದೇ ಜನರ ಸಮಸ್ಯೆಯನ್ನು ಪರಿಹರಿಸುವುದಕ್ಕೆ ಸಾಧ್ಯವಾಗುತ್ತಿಲ್ಲ. ಇದೀಗ ಬಿಬಿಎಂಪಿಯ ಮುಖ್ಯ ಆಯುಕ್ತರೇ ಈ ಕೆಲಸಕ್ಕೆ ಮುಂದಾಗಿದ್ದಾರೆ.
ಬೆಂಗಳೂರಿನಲ್ಲಿ ಕಸ, ರಸ್ತೆ ಸೇರಿದಂತೆ ಮೂಲಸೌಕರ್ಯ ಸಮಸ್ಯೆ ಎದುರಾಗಿದೆ. ಸಣ್ಣ ಮಳೆ ಬಂದರೂ ಬೆಂಗಳೂರಿನಲ್ಲಿ ಸಮಸ್ಯೆ ಆಗುತ್ತಿದೆ. ಇದರೊಂದಿಗೆ ಬೆಂಗಳೂರಿನ ವಿವಿಧ ಭಾಗದಲ್ಲಿ ಕೆಲವೊಂದು ಸಮಸ್ಯೆಗಳಿದ್ದು. ಜನರಿಗೆ ಯಾರ ಬಳಿ ಹೇಳಿಕೊಳ್ಳಬೇಕು ಎಂದು ತಿಳಿಯುತ್ತಿಲ್ಲ. ಹೀಗಾಗಿ, ಕಳೆದ ಕೆಲವು ತಿಂಗಳುಗಳಿಂದ ಮುಖ್ಯ ಆಯುಕ್ತರ ನಡೆ ವಲಯದ ಕಡೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಯೋಜನೆಯ ಮೂಲಕ ಮುಖ್ಯ ಆಯುಕ್ತರೇ ನಿಮ್ಮ ಬಳಿ ಬಂದು ನಿಮ್ಮ ಸಮಸ್ಯೆಯನ್ನು ಕೇಳಲಿದ್ದಾರೆ ಎಂದು ಬಿಬಿಎಂಪಿ ಹೇಳಿದೆ.
ಮುಖ್ಯ ಆಯುಕ್ತರ ನಡೆ-ವಲಯದ ಕಡೆ ಕಾರ್ಯಕ್ರಮ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 8 ವಲಯಗಳಲ್ಲಿ ಸಾರ್ವಜನಿಕ ಕುಂದು ಕೊರತೆಗಳನ್ನು ಪರಿಹರಿಸಲು ಸಾರ್ವಜನಿಕರಿಗೆ ಅನುಕೂಲವಾಗಲೆಂದು ಹಾಗೂ ವಲಯ ಮಟ್ಟದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯ ಚಟುವಟಿಕೆಗಳನ್ನು ನಿಯಮಿತವಾಗಿ ಪರಿಶೀಲನೆ ನಡೆಸುವ ಸಲುವಾಗಿ, ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಮುಖ್ಯ ಆಯುಕ್ತರ ನಡೆ-ವಲಯದ ಕಡೆ ಕಾರ್ಯಕ್ರಮ ನಡೆಸಲಿದ್ದಾರೆ.
ಮುಂದುವರಿದು, ಆಯಾ ವಲಯಗಳ ವ್ಯಾಪ್ತಿಯಲ್ಲಿ ಅಧಿಕಾರಿಗಳೊಂದಿಗೆ ಬೆಳಗ್ಗೆ ಬೆಳಗ್ಗೆ 7 ರಿಂದ 10 ಗಂಟೆಯವರೆಗೆ ವಿವಿಧ ಸ್ಥಳಗಳ ಭೆಟಿ ನೀಡಿ ಪರೀಶೀಲಿಸಿದ ಬಳಿಕ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರಿಂದ ಕುಂದು- ಕೊರತೆ /ಅಹವಾಲುಗಳನ್ನು ಪರಿಶೀಲಿಸಲಿದ್ದಾರೆ. ವಲಯಗಳಲ್ಲಿ ನಡೆಯುವ “ಮುಖ್ಯ ಆಯುಕ್ತರ ನಡೆ ವಲಯದ ಕಡೆ” ಕಾರ್ಯಕ್ರಮ ವೇಳಾಪಟ್ಟಿ ಈ ಕೆಳಕಂಡಂತಿದೆ. 👇
* ಪ್ರತಿ ತಿಂಗಳ ಮೊದಲನೇ ಮಂಗಳವಾರ- ಪೂರ್ವ ವಲಯ
* ಪ್ರತಿ ತಿಂಗಳ ಮೊದಲನೇ ಶುಕ್ರವಾರ- ಪಶ್ಚಿಮ ವಲಯ
* ಪ್ರತಿ ತಿಂಗಳ ಎರಡನೇ ಮಂಗಳವಾರ- ಮಹದೇವಪುರ ವಲಯ
* ಪ್ರತಿ ತಿಂಗಳ ಎರಡನೇ ಶುಕ್ರವಾರ- ಯಲಹಂಕ ವಲಯ
* ಪ್ರತಿ ತಿಂಗಳ ಮೂರನೇ ಮಂಗಳವಾರ- ದಾಸರಹಳ್ಳಿ ವಲಯ
* ಪ್ರತಿ ತಿಂಗಳ ಮೂರನೇ ಶುಕ್ರವಾರ- ರಾಜರಾಜೇಶ್ವರಿ ನಗರ ವಲಯ
* ಪ್ರತಿ ತಿಂಗಳ ನಾಲ್ಕನೇ ಮಂಗಳವಾರ- ಬೊಮ್ಮನಹಳ್ಳಿ ವಲಯ
* ಪ್ರತಿ ತಿಂಗಳ ನಾಲ್ಕನೇ ಶುಕ್ರವಾರ – ದಕ್ಷಿಣ ವಲಯ
ನೌಕರರ ಸಾಮೂಹಿಕ ರಜೆ: ಬಿಬಿಎಂಪಿ ಕೇಂದ್ರ ಮತ್ತು ವಲಯ ಕಚೇರಿಗಳು ನಿನ್ನೆ ಸಂಪೂರ್ಣ ಸ್ತಬ್ಧ


