BBMP
Loading ...

Traffi

ಬೆಂಗಳೂರು:- ವಾಹನ ಸವಾರರು ನೋಡಲೇಬೇಕಾದ ಸ್ಟೋರಿ ಇದು. ಪೀಣ್ಯಯಿಂದ ಜಾಲಹಳ್ಳಿ ಕ್ರಾಸ್ ಜಂಕ್ಷನ್​​​ವರೆಗೆ ಸಂಚಾರ ನಿರ್ಬಂಧ ವಿಧಿಸಲಾಗಿದೆ.

ವೈಟ್ ಟಾಪಿಂಗ್ ಕಾಮಗಾರಿ ಹಿನ್ನೆಲೆ ಇಂದು ಕಾಮಗಾರಿ ಪೂರ್ಣಗೊಳ್ಳುವವರೆಗೆ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಮತ್ತು ವಾಹನ ನಿಲುಗಡೆ ನಿಷೇಧಿಸಲಾಗಿದೆ.

ವಾಹನ ಸಂಚಾರ ನಿರ್ಬಂಧ
ಪೀಣ್ಯ 100 ಅಡಿ ರಸ್ತೆಯಲ್ಲಿ ಪೀಣ್ಯ ಇಂಡಸ್ಟ್ರಿಯಲ್ ಅಸೋಸಿಯೇಷನ್ ಜಂಕ್ಷನ್​ನಿಂದ ಜಾಲಹಳ್ಳಿ ಕ್ರಾಸ್ ಜಂಕ್ಷನ್​ವರೆಗೆ ಸಂಚಾರ ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗ
ಪೀಣ್ಯ 100 ಅಡಿ ರಸ್ತೆಯ ಮೂಲಕ ಜಾಲಹಳ್ಳಿ ಕ್ರಾಸ್ ಜಂಕ್ಷನ್​ಕಡೆಗೆ ಹೋಗುವ ವಾಹನಗಳು: ಪೀಣ್ಯ ಇಂಡಸ್ಟ್ರಿಯಲ್ ಅಸೋಸಿಯೇಷನ್ ಜಂಕ್ಷನ್​ನಲ್ಲಿ ಬಲಕ್ಕೆ ಚಲಿಸಿ ರಸ್ತೆಯ ಮತ್ತೊಂದು ಬದಿಯ ಮೂಲಕ ದ್ವಿಮುಖ ಸಂಚಾರ ರಸ್ತೆಯ ಮೂಲಕ ಸಾಗಬಹುದು.

ಎಲ್ಲಾ ಮಾದರಿಯ ಸರಕು ಸಾಗಣೆ ವಾಹನಗಳು ಟಿವಿಎಸ್ ಕ್ರಾಸ್ ಜಂಕ್ಷನ್​ನಿಂದ ಪೀಣ್ಯ ಪೊಲೀಸ್ ಠಾಣೆ ರಸ್ತೆಯ ಮೂಲಕ ಸಾಗಿ, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್​ನಲ್ಲಿ ತುಮಕೂರು ರಸ್ತೆಯ ಮೂಲಕ ಸಾಗಬಹುದು.

ವಾಹನ ನಿಲುಗಡೆ ನಿಷೇಧಿಸಿರುವ ರಸ್ತೆ:
ಪೀಣ್ಯ ಪೊಲೀಸ್ ಠಾಣೆ ರಸ್ತೆ, ಪೀಣ್ಯ 100 ಅಡಿ ರಸ್ತೆ (ಜಾಲಹಳ್ಳಿ ಕ್ರಾಸ್ ನಿಂದ ಟಿವಿಎಸ್ ಕ್ರಾಸ್ ವರೆಗೆ) ಹಾಗೂ ಪೀಣ್ಯ 1ನೇ ಕ್ರಾಸ್ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನಗಳ ನಿಲುಗಡೆಯನ್ನು ಕಾಮಗಾರಿ ಪೂರ್ಣಗೊಳ್ಳುವವರೆಗೆ, ತಾತ್ಕಾಲಿಕವಾಗಿ ನಿರ್ಬಂಧಿಸಿಲಾಗಿದೆ.

ಬೆಂಗಳೂರು ವಕೀಲರ ಸಂಘದ ​​ಚುನಾವಣೆ: ಸರಳ, ಸಜ್ಜನ ಹರಿಣಿಗೆ ನಿಮ್ಮ ಅಮೂಲ್ಯ ಮತ ನೀಡಿ​

Leave a Reply

Your email address will not be published. Required fields are marked *