BBMP
Loading ...

Auto

ಬೆಂಗಳೂರು:- ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಆಟೋ ಪ್ರಯಾಣ ಬೆಲೆ ಹೆಚ್ಚಳವಾಗಿದ್ದು, ಪ್ರಯಾಣಿಕರು ಶಾಕ್ ಆಗಿದ್ದಾರೆ.

ಈ ನಡುವೆ ಆಟೋರಿಕ್ಷಾ ಪ್ರಯಾಣ ದರ ಕೂಡ ಏರಿಕೆ ಮಾಡುವಂತೆ ಒತ್ತಡ ಹೇರಲಾಗುತ್ತಿದೆ. ಆಟೋರಿಕ್ಷಾ ಪ್ರಯಾಣ ದರ ಏರಿಕೆ ಮಾಡುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಕೆಲ ಆಟೋ ಚಾಲಕ ಸಂಘಟನೆಗಳು ಮನವಿ ಮಾಡಿವೆ.

ಒಂದು ಕಿಲೋಮೀಟರ್​​ಗೆ 5 ರೂಪಾಯಿ, ಎರಡು ಕಿಲೋಮೀಟರ್​ಗೆ 10 ರೂಪಾಯಿ ಏರಿಕೆ ಮಾಡುವಂತೆ ಮಾಡಿವೆ. ಸದ್ಯ ಆಟೋರಿಕ್ಷಾ ಪ್ರಯಾಣ ದರ ಕಿಲೋಮೀಟರ್​ಗೆ 30 ರೂಪಾಯಿ ಇದೆ. ಇದೀಗ 40 ರೂಪಾಯಿಗೆ ಏರಿಕೆ ಮಾಡುವಂತೆ ಮನವಿ ಮಾಡಿವೆ.

ದರ ಏರಿಕೆ ಸಂಬಂಧ 2024ರ ಡಿಸೆಂಬರ್​ 23 ರಂದು ಅಸೋಸಿಯೇಷನ್​ಗಳ ಸಭೆ ಕರೆಯಲಾಗಿತ್ತು. ಆದರೆ, ಕಾರಣಾಂತರಗಳಿಂದ ಸಭೆಯನ್ನು ಮುಂದೂಡಲಾಯಿತು. ಈಗ ಮತ್ತೆ ಇದೇ ತಿಂಗಳು ಮೂರನೇ ವಾರದಲ್ಲಿ ಸಭೆ ನಡೆಯಲಿದ್ದು, ಪ್ರಯಾಣ ದರ ಏರಿಕೆ ಬಗ್ಗೆ ತೀರ್ಮಾನ ಆಗಲಿದೆ.

ಆದರೆ, ಆಟೋ ಸಂಘಟನೆಗಳಲ್ಲೇ ದರ ಏರಿಕೆ ಬಗ್ಗೆ ಒಮ್ಮತ್ತವಿಲ್ಲ. ಬೈಕ್ ಟ್ಯಾಕ್ಸಿ ಬ್ಯಾನ್ ಆಗುವವರೆಗೂ ಆಟೋ ಪ್ರಯಣಾ ದರ ಏರಿಕೆ ಬೇಡ ಎನ್ನುತ್ತಿದ್ದಾರೆ. ಎಲ್ಲ ಚಾಲಕ ಸಂಘಟನೆಗಳಿಂದ ಒಂದೇ ಅಭಿಪ್ರಾಯ ನೀಡಿದ ಬಳಿಕ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ದರ ಏರಿಕೆ ಮಾಡಲಿದ್ದಾರೆ.

ವಶಕ್ಕೆ ಪಡೆದ ಆಟೋ ಹಿಂದಿರುಗಿಸಲು 40 ಸಾವಿರ ರೂ. ಲಂಚ: ಸಂಜಯನಗರ ಠಾಣೆಯ ASI ಸೇರಿ ಇಬ್ಬರ ಬಂಧನ

Leave a Reply

Your email address will not be published. Required fields are marked *