Greater Bengaluru News9: ರಾಜ್ಯಾದ್ಯಂತ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿರುವುದರಿಂದ ಬೆಂಗಳೂರಿನ ವಿಜಯನಗರದಲ್ಲಿರುವ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖ ಮಠದಲ್ಲಿಂದು (ಸೆ.20) ಒಕ್ಕಲಿಗ ಸಮುದಾಯದ ಜಾಗೃತಿ ಸಭೆ ನಡೆಸಿತು.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸೆ.22 ರಿಂದ ಅಕ್ಟೋಬರ್ 7ರ ವರೆಗೆ ರಾಜ್ಯಾದ್ಯಂತ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಸಮೀಕ್ಷೆ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಜಯನಗರದಲ್ಲಿರುವ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖ ಮಠದಲ್ಲಿ ನಡೆದ ಒಕ್ಕಲಿಗ ಸಮುದಾಯದ ಜಾಗೃತಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಆದಿಚುಂಚನಗಿರಿ ಮಠದ ಪೀಠಾಧಿಪತಿಗಳಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಸ್ವಾಮೀಜಿ, ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ನಿಶ್ಚಲಾನಂದನಾಥ ಸ್ವಾಮೀಜಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಮುದಾಯದ ನಾಯಕರು ಪಾಲ್ಗೊಂಡು, ಜಾತಿಗಣತಿಗೆ ಸಂಬಂಧಿಸಿದಂತೆ ಚರ್ಚಿಸಿದರು.


