BBMP
Loading ...

ಬೆಂಗಳೂರು: ಬೆಂಗಳೂರು ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕ ತಿಪ್ಪೇಸ್ವಾಮಿ ಮನೆಯಲ್ಲೂ ಲೋಕಯುಕ್ತ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ. ಬೆಂಗಳೂರಿನ ನಗರ ಯೋಜನಾ ಘಟಕದ ನಿರ್ದೇಶಕ ತಿಪ್ಪೇಸ್ವಾಮಿ ನಿವಾಸ ಹಾಗೂ ಕಚೇರಿ ಸೇರಿದಂತೆ ಹಲವು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ತಿಪ್ಪೇಸ್ವಾಮಿ ಪತ್ನಿಯ ತವರು ಮನೆಯಾದ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಕುದರೆ ಗ್ರಾಮದ ಮನೆಯಲ್ಲಿ ಲೋಕಾ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.

ದಾವಣಗೆರೆ ಲೋಕಾಯುಕ್ತ ಇನ್ಸ್ ಪೆಕ್ಟರ್ ಪ್ರಭು ನೇತ್ರತ್ವದಲ್ಲಿ ಶೋಧ ನಡೆಯುತ್ತಿದೆ. ಅಲ್ಲದೆ ಮಾವನ ಮನೆಯಲ್ಲಿ ತಿಪ್ಪೇಸ್ವಾಮಿ ಅವರಿಗೆ ಸೇರಿದ ಆಸ್ತಿ ದಾಖಲೆಗಳು ಏನಾದರೂ ಸಿಗಬಹುದು ಎಂದು ಲೋಕಾ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ. ಗಿರಿನಗರದಲ್ಲಿ ಇರುವ ಬಂಗಲೆಗೆ ಎಸ್‌ಪಿ ಶ್ರೀನಾಥ್ ಜೋಷಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಬೆಳಗ್ಗೆ 7 ಗಂಟೆಯಿಂದ ಬಂಗಲೆಯಲ್ಲಿ ಪರಿಶೀಲನೆ ನಡೆಯುತ್ತಿದೆ.

ಈ ವೇಳೆ 28 ಕ್ಕೂ ಹೆಚ್ಚು ಜೊತೆ ಓಲೆ, ಎಂಟಕ್ಕೂ ಹೆಚ್ಚು ಐಷಾರಾಮಿ ವಾಚ್‌ಗಳು, 23 ಕ್ಕೂ ಹೆಚ್ಚು ಚಿನ್ನದ ಸರ, ಮುತ್ತಿನ ಪಂಡೆಂಟ್ ಇರೊ ಸರ ಪತ್ತೆಯಾಗಿದ್ದು, ಜೊತೆಯಲ್ಲಿ ಕೆಜಿಗಟ್ಟಲೆ ಬೆಳ್ಳಿ ವಸ್ತುಗಳು, ನಗದು, ಉಂಗುರ, ಆಸ್ತಿಪತ್ರ ಪತ್ತೆಯಾಗಿದೆ. ಅಪಾರ ಪ್ರಮಾಣದ ಚಿನ್ನ ಪತ್ತೆಯಾದ ಹಿನ್ನೆಲೆಯಲ್ಲಿ ಚಿನ್ನಾಭರಣ ತೂಕ ಹಾಕಲು ಲೋಕಾ ಅಧಿಕಾರಿಗಳು ತಿಪ್ಪೇಸ್ವಾಮಿ ಮನೆಗೆ ಅಕ್ಕಸಾಲಿಗನನ್ನು ಕರೆಸಿದ್ದಾರೆ.

ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಸರಿಯಾಗಿ ವಿದ್ಯುತ್ ನೀಡದ ಜೆಸ್ಕಾಂ: ಅಧಿಕಾರಿಯನ್ನು ತರಾಟೆ ತೆಗೆದುಕೊಂಡ ಈಶ್ವರ್ ಖಂಡ್ರೆ

Leave a Reply

Your email address will not be published. Required fields are marked *