BBMP
Loading ...

Ganesha

ಬೆಂಗಳೂರು: ಗೌರಿ-ಗಣೇಶ ಹಬ್ಬದ ದಿನಗಳು ಹತ್ತಿರವಾಗ್ತಿದ್ದಂತೆ ಬಿಬಿಎಂಪಿ ಕೂಡ ಅಲರ್ಟ್ ಆಗಿದೆ. ಕೆಲವು ಸೂಚನೆ ಹಾಗೂ ನಿಯಮಗಳ ಕುರಿತು ಬಿಬಿಎಂಪಿ ಕಮಿಷನರ್ ತಿಳಿಸಿದ್ದಾರೆ. ಗಣೇಶ ಹಬ್ಬವನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತೆ. ಬೆಂಗಳೂರಿನ ಬೀದಿ ಬೀದಿಗಳಲ್ಲೂ ಯುವಕರ ಗುಂಪು ಗಣೇಶನನ್ನು ಕೂರಿಸಿ ಹಬ್ಬವನ್ನು ಸಡಗರದಿಂದ ಆಚರಿಸ್ತಾರೆ. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಬಿಬಿಎಂಪಿ ಕೆಲ ನಿರ್ಧಾರಗಳನ್ನು ತೆಗೆದುಕೊಂಡಿದೆ.

ಪಿಓಪಿ ಗಣೇಶ ಸಂಪೂರ್ಣ ನಿಷೇಧ
ಅಗಸ್ಟ್ 27 ರಂದು ಗಣೇಶ್ ಹಬ್ಬ ಹಿನ್ನೆಲೆ ಆಲರ್ಟ್ ಆಗಿರುವ BBMP ಕಮಿಷನರ್​ ವಲಯದ ಅಧಿಕಾರಿಗಳ ಜೊತೆ ಸಭೆ ನಡೆಸಿದ್ರು. ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಹಬ್ಬ ಆಚರಿಸಲು ಕಮಿಷನರ್ ಕರೆ ನೀಡಿದ್ದಾರೆ. ಪಿಓಪಿ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿಗಳನ್ನು ತಯಾರಿಸುವುದನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಗಣೇಶ ಮೂರ್ತಿಗಳ ವಿಸರ್ಜನೆಗೆ ಅವಕಾಶ
ಪಿಓಪಿ ಗಣೇಶ ಮೂರ್ತಿಗಳನ್ನು ತಯಾರಿಸುವವರ ಮೇಲೆ ಕೇಸ್ ದಾಖಲಿಸಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ. ನಗರದಲ್ಲಿ 40ಕ್ಕೂ ಹೆಚ್ಚು ಕೆರೆಗಳ ಬಳಿ ಕಲ್ಯಾಣಿಗಳು ಪ್ರತ್ಯೇಕ ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅವಕಾಶ ನೀಡಲಾಗಿದೆ.

ಕಲ್ಯಾಣಿಗಳ ಬಳಿ ಸೂಕ್ತ ವ್ಯವಸ್ಥೆ
ಆ ಎಲ್ಲಾ ಕಲ್ಯಾಣಿಗಳ ಬಳಿ ವ್ಯವಸ್ಥಿತವಾಗಿ ಬ್ಯಾರಿಕೇಡಿಂಗ್ ವ್ಯವಸ್ಥೆ ಇರಲಿದ್ದು, ನುರಿತ ಈಜುಗಾರರು, ವಿದ್ಯುತ್ ದೀಪಗಳ ಸೌಲಭ್ಯ, ಅಗತ್ಯವಿರುವ ಕಡೆ ಕ್ರೇನ್‌ಗಳ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ವ್ಯವಸ್ಥೆಗೆ ಬಿಬಿಎಂಪಿ ಅಧಿಕಾರಿಗಳಿಗೆ ಕಮಿಷನರ್​ ಸೂಚನೆ ನೀಡಿದ್ದಾರೆ. ಭದ್ರತಾ ದೃಷ್ಟಿಯಿಂದ ಸಿಸಿಟಿವಿ ಅಳವಡಿಕೆ, ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆಗೆ ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲದೇ ಹಲವು ನಗರಗಳಲ್ಲಿ ತಾತ್ಕಾಲಿಕ ಮೊಬೈಲ್ ಟ್ಯಾಂಕ್‌ ಗಳ ವ್ಯವಸ್ಥೆ ಕೂಡ ಇರಲಿದೆ.

ನಗರದ ಮನೆಗಳಲ್ಲಿ ಪ್ರತಿಷ್ಠಾಪಿಸುವ ಸಣ್ಣ-ಸಣ್ಣ ಗಣೇಶ ಮೂರ್ತಿಗಳನ್ನು ವಿಸರ್ಜನೆ ಹಿನ್ನೆಲೆ ಆಯಾ ವಾರ್ಡ್​​ಗಳ ಪ್ರಮುಖ ಸ್ಥಳ ಹಾಗೂ ಜಂಕ್ಷನ್‌ ಗಳಲ್ಲಿ ಸಂಚಾರಿ ವಿಸರ್ಜನಾ ಘಟಕ (ಮೊಬೈಲ್ ಟ್ಯಾಂಕ್) ಗಳ ತಾತ್ಕಾಲಿಕ ವ್ಯವಸ್ಥೆ ಇರಲಿದೆ. ಗಣಪತಿ ಪ್ರತಿಷ್ಠಾಪನೆ ವೇಳೆ ಮೈಕ್​ ಬಳಕೆಗೂ ಸಮಯ ನಿಗದಿಯಾಗಲಿದೆ. ಶಬ್ದ ಹಾಗೂ ಪರಿಸರ ಮಾಲಿನ್ಯ ತಡೆಗೆ ಬಿಬಿಎಂಪಿ ಕೆಲವು ಕ್ರಮಗಳನ್ನು ತೆಗೆದುಕೊಳ್ಳಲಿದೆ. ಪರಿಸರ ಮಾಲಿನ್ಯವಾಗದಂತೆ ಕಡಿಮೆ ಪಟಾಕಿ ಬಳಕೆಗೆ ಸೂಚಿಸಲಾಗಿದೆ. ಅಲ್ಲದೇ ಸ್ಥಳೀಯರಿಗೆ ತೊಂದರೆಯಾಗದಂತೆ ಹಬ್ಬ ಆಚರಿಸುವಂತೆ ಯುವ ಪೀಳಿಗೆಗೆ ಬಿಬಿಎಂಪಿ ಕಮಿಷನರ್​ ಕರೆ ಕೊಟ್ಟಿದ್ದಾರೆ.

ಭೂ ಉಪಯೋಗ ಬದಲಾವಣೆಗೂ ಶುಲ್ಕ: ನಗರಾಭಿವೃದ್ಧಿ ಇಲಾಖೆ ಅಧಿಸೂಚನೆ

Leave a Reply

Your email address will not be published. Required fields are marked *