ಬೆಂಗಳೂರು: ಸಿಲಿಕಾನ್ ಸಿಟಿಯ ಸ್ಥಳೀಯ ಆಡಳಿತ ಸಂಸ್ಥೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬುಧವಾರ ಮಾಂಸ ಮಾರಾಟ ಹಾಗೂ ಪ್ರಾಣಿ ವಧೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ದೇಶದಲ್ಲಿ ಅ.2ರ ಬುಧವಾರದಂದು ಗಾಂಧಿ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ. ಅಹಿಂಸೆಯನ್ನು ಮಾರ್ಗದಲ್ಲಿ ನಡೆದ ಗಾಂಧಿ ಅವರ ದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳುರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ ಮಾಡಲಾಗಿದೆ. ಆದ್ದರಿಮದ ಪಾಲಿಕೆ ವ್ಯಾಪ್ತಿಯ ಎಲ್ಲ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ನಗರದಾದ್ಯಂತ ಮಾಂಸ ಮಾರಾಟ ನಿಷೇಧ ಮಾಡಲಾಗಿದೆ ಎಂದು ಪಾಲಿಕೆ ಪಶುಪಾಲನಾ ವಿಭಾಗದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಒಂದು ವೇಳೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಅ.2ರಂದು ಪ್ರಾಣಿ ವಧೆ ಮಾಡುವುದಾಲೀ ಅಥವಾ ಮಾಂಸ ಮಾರಾಟ ಮಾಡುವುದಾಗಲೀ ಕಂಡುಬಂದರೆ ಪಾಲಿಕೆ ವತಿಯಿಂದ ಕ್ರಮ ಕೈಗೊಳ್ಳಲಾಗುತ್ತದೆ. ಇನ್ನು ಕಸಾಯಿ ಖಾನೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಗುರುವಾರದಿಂದ ಎಂದಿನಂತೆ ಕಸಾಯಿ ಖಾನೆಗಳು ಹಾಗೂ ಮಾಂಸ ಮಾರಾಟ ಕಾರ್ಯ ನಡೆಯಲಿದೆ ಎಂದು ಪಾಲಿಕೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಅಮಾನವೀಯ ಘಟನೆ : 1 ದಿನದ ಗಂಡುಮಗುವನ್ನು ಜೀವಂತವಾಗಿ ಹೂತು ಹಾಕಿದ ಪಾಪಿಗಳು!
ಸರ್ಕಾರ ಉರುಳಿಸಲು 1000 ಕೋಟಿ ವೆಚ್ಚ ಪ್ಲ್ಯಾನ್; ಯತ್ನಾಳ್ ಮಾಹಿತಿ ಬಗ್ಗೆ ಐಟಿ ತನಿಖೆಗೆ ಡಿಕೆಶಿ ಆಗ್ರಹ


