BBMP
Loading ...

BBMP 1

ಬೆಂಗಳೂರಿನಲ್ಲಿ ಬಜೆಟ್ ಮಂಡನೆ ಮಾಡಿದ ಕೆಲವೇ ದಿನಗಳಲ್ಲಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯು ನಗರದ ಜನರಿಗೆ ಭರ್ಜರಿ ಗುಡ್‌ನ್ಯೂಸ್‌ ಕೊಟ್ಟಿದೆ. ಬೆಂಗಳೂರಿನಲ್ಲಿ ಬಿಬಿಎಂಪಿಯು ವಿವಿಧ ಯೋಜನೆಗಳನ್ನು ಪರಿಚಯಿಸಿದೆ. ಇದೀಗ ವಿವಿಧ ಸರ್ಕಾರಿ ಯೋಜನೆಗಳ ಬಗ್ಗೆ ಬಿಗ್‌ ಅಪ್ಡೇಟ್ಸ್‌ ಕೊಡಲಾಗಿದೆ. ಅದೇನು ಎನ್ನುವ ವಿವರ ಇಲ್ಲಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 2024-25ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳಿಗೆ ಈಗಾಗಲೇ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇದೀಗ ಅವಧಿಯನ್ನು 2ನೇ ಮೇ 2025 ರವೆರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಬಿಬಿಎಂಪಿಯ ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ಅವರು ತಿಳಿಸಿದ್ದಾರೆ. ಈ ಮೂಲಕ ವಿವಿಧ ಸರ್ಕಾರಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಮಾಡುವ ಅವಧಿ ವಿಸ್ತರಣೆಯಾದಂತೆ ಆಗಿದೆ.

ಬೆಂಗಳೂರಿನಲ್ಲಿ ಅತಿ ಹೆಚ್ಚು ಜನರು ಕಲ್ಯಾಣ ಕಾರ್ಯಕ್ರಮಗಳ ಫಲಾನುಭವಿಗಳಾಬೇಕು ಹಾಗೂ ಹೆಚ್ಚು ಜನ ಈ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎನ್ನುವ ಉದ್ದೇಶದಿಂದ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರ ನಿರ್ದೇಶನದ ಮೇರೆಗೆ, 2024-25ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು. ಈ ಅವಧಿಯನ್ನು ಇದೀಗ 2ನೇ ಮೇ 2025 ರವರೆಗೆ ವಿಸ್ತರಿಸಲಾಗಿದೆ ಎಂದು ಬಿಬಿಎಂಪಿಯು ಹೇಳಿದೆ.

ಬೆಂಗಳೂರಿನ ಎಲ್ಲಾ ವರ್ಗಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು, ಪೌರಕಾರ್ಮಿಕರು, ಆರ್ಥಿಕವಾಗಿ ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದವರು, ವಿಶೇಷ ಚೇತನರು, ಮಹಿಳೆಯರು ಹಾಗೂ ತೃತೀಯ ಲಿಂಗಿಗಳು ಸೇರಿದಂತೆ ಅರ್ಹ ಅಭ್ಯರ್ಥಿಗಳಿಂದ ಭೌತಿಕ ಹಾಗೂ ಇಂಟರ್‌ ನೆಟ್‌ ತಂತ್ರಾಂಶದ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಬಹುದಾದ ಕಲ್ಯಾಣ ಕಾರ್ಯಕ್ರಮಗಳ ವಿವರ ಈ ರೀತಿ ಇದೆ
* ಬೆಂಗಳೂರಿನಲ್ಲಿ ಒಂಟಿ ಮನೆ ನಿರ್ಮಾಣ / ಅಮೃತ ಮಹೋತ್ಸವ ಯೋಜನೆ.
* ಶೈಕ್ಷಣಿಕ ಕಾರ್ಯಕ್ರಮಗಳ ಅಡಿಯಲ್ಲಿ ಶಾಲಾ ಶುಲ್ಕ ಮರುಪಾವತಿ / ಉನ್ನತ ವ್ಯಾಸಂಗಕ್ಕೆ / ವಿದೇಶ ವ್ಯಾಸಂಗಕ್ಕಾಗಿ ಸಹಾಯಧನ ಸೌಲಭ್ಯ

* ಬಿಬಿಎಂಪಿ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಗಂಭೀರ ಸ್ವರೂಪ ಕಾಯಿಲೆಗಳಿಗೆ / ಹಿರಿಯರ ಆರೋಗ್ಯ ತಪಾಸಣೆ / ವಿಶೇಷ ಚೇತನರಿಗೆ ಅಂಗಾಂಗಗಳ ಜೋಡಣೆ / ಅಂಗವೈಫಲ್ಯ ಸರಿಪಡಿಸುವ ಶಸ್ತ್ರಚಿಕಿತ್ಸೆಗೆ / ವಿಶೇಷ ಚೇತನರಿಗೆ ಫೀಜಿಯೋತೆರಫಿಗೆ ಆರ್ಥಿಕ ಸಹಾಯಧನ.

* ಆರ್ಥಿಕ ಸಹಾಯ ಹಾಗೂ ಪ್ರೋತ್ಸಾಹ ಧನದಡಿಯಲ್ಲಿ ಸಂಗೀತ ಸಾಧನ ಖರೀದಿಸಲು / ಕ್ರೀಡಾಪಡುಗಳಿಗೆ, ಸಣ್ಣ ಉದ್ಯಮ ಹಾಗೂ ಸ್ವಯಂ ಉದ್ಯೋಗಕ್ಕೆ / ವಿಶೇಷ ಚೇತನರಿಗೆ ಮೆಡಿಕಲ್ ಶಾಫ್ ನಿರ್ಮಾಣಕ್ಕೆ ಸಹಾಯ / ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಸ್ವಂತ ಸಣ್ಣ ಕೈಗಾರಿಕೋದ್ಯಮ ಸ್ಥಾಪಿಸಲು / ಆಟೋ, ಕಾರ್ ಖರೀದಿಸಲು ಸಹಾಯಧನ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆಯಂತಹ ಪ್ರಮುಖ ಯೋಜನೆಗಳು ಇದರಲ್ಲಿ ಸೇರಿದೆ.
* ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿರುವ / ನಡೆಸುವ ಸಂಘ-ಸಂಸ್ಥೆಗಳಿಗೆ / ವಿಶೇಷ ಚೇತನ ಸಂಸ್ಥೆಗಳಿಗೆ ವಿದ್ಯಾ ಸಂಸ್ಥೆಗಳಿಗೆ ಆರ್ಥಿಕ ಸಹಾಯ ಸಿಗಲಿದೆ.

* ಪೌರಕಾರ್ಮಿಕರಿಗೆ ಹಾಗೂ ಉದ್ಯೋಗಸ್ಥ ಮಹಿಳೆಯರಿಗೆ ಎಲೆಕ್ಟ್ರಿಕಲ್ ದ್ವಿಚಕ್ರ ವಾಹನ ವಿತರಣೆ (ಗಾರ್ಮೆಂಟ್ಸ್‌ಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಉದ್ಯೋಗಿಗಳಿಗೆ ಇದರಲ್ಲಿ ಮೊದಲ ಆದ್ಯತೆ ಇರಲಿದೆ).

* ಮಹಿಳಾ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕೇಂದ್ರಗಳಲ್ಲಿ ತರಬೇತಿ ಪಡೆದ ಫಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಮಾಡಲಾಗುವುದು

* ವಿಶೇಷ ಚೇತನರಿಗೆ ಹೆಚ್ಚುವರಿಯಾಗಿ ಅಳವಡಿಸಿರುವ ಉಚಿತ ದ್ವಿಚಕ್ರ ವಾಹನ ಸಿಗಲಿದೆ.

* ವಿಶೇಷ ಚೇತನರಿಗೆ ಉಚಿತ ಎಲೆಕ್ಟ್ರಿಕಲ್ ವೀಲ್ ಚೇರ್ ವಿತರಣೆ.

* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗಕ್ಕೆ ಸೇರಿರುವ ಬೀದಿ ಬದಿ ವ್ಯಾಪಾರಿಗಳಿಗೆ ಇ-ಮಾರಾಟ ವಾಹನ ಖರೀದಿಗೆ ಸಹಾಯಧನ ಶೇ.90ರಷ್ಟು ಅಥವಾ 1.50 ಲಕ್ಷ ರೂಪಾಯಿಗ ವರೆಗೆ ಯಾವುದು ಕಡಿಮೆ ಇದೆಯೋ ಆ ಮೊತ್ತದ ಸಹಾಯಧನ ಸಿಗಲಿದೆ.

* ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ, ಪೌರಕಾರ್ಮಿಕರ ಮಕ್ಕಳಿಗೆ ಹಾಗೂ ಎಲ್ಲಾ ವರ್ಗದ ಮಹಿಳೆಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಸಿಗಲಿದೆ.

ಪಾಲಿಕೆ ವೆಬ್‌ಸೈಟ್ ನಲ್ಲಿ ಸಂಪೂರ್ಣ ವಿವರ ಸಿಗಲಿದೆ
ಬಿಬಿಎಂಪಿಯ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪಾಲಿಕೆ ವೆಬ್‌ಸೈಟ್‌ನಲ್ಲಿ ಸಂಪೂರ್ಣ ವಿವರಗಳನ್ನು ಕೊಡಲಾಗಿದೆ. ಅರ್ಹ ಫಲಾನುಭವಿಗಳು ಪಾಲಿಕೆ ವೆಬ್‌ಸೈಟ್ ಅಥವಾ https://site.bbmp.gov.in/departmentwebsites/welfare/ ಇಲ್ಲವೇ https://site.bbmp.gov.in/departmentwebsites/welfare/welfareactivities.html ಲಿಂಕ್‌ಗೆ ಭೇಟಿ ನೀಡುವ ಮೂಲಕ ಎಲ್ಲಾ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ ಎಂದು ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯು ಅನುದಾನದ ಲಭ್ಯತೆಯನ್ನು ಪರಿಗಣಿಸಿ ಮೇಲ್ಕಂಡ ಕಾರ್ಯಕ್ರಗಳಿಗೆ ಆಯ್ಕೆಯಾಗುವ ಫಲಾನುಭವಿಗಳಿಗೆ ಸೌಲಭ್ಯವನ್ನು ನೀಡುವುದಾಗಿ ಸಹ ಹೇಳಿದೆ. .

ಪಾಲಿಕೆ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, 2024-25ನೇ ಸಾಲಿನ ಪಾಲಿಕೆಯ ಅನುಮೋದಿತ ಮಾರ್ಗಸೂಚಿಗಳ ಅನುಸಾರ ಅರ್ಜಿಯನ್ನು ಪಾಲಿಕೆಯ ವಲಯ ಜಂಟಿ ಆಯುಕ್ತರ ಕಚೇರಿಗಳಲ್ಲಿರುವ ಸಹಾಯಕ ಕಂದಾಯ ಅಧಿಕಾರಿ (ಕಲ್ಯಾಣ) ಅವರ ಕಚೇರಿಯಿಂದ ಪಡೆದುಕೊಳ್ಳಬಹುದಾಗಿದೆ. ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಭೌತಿಕ ಅರ್ಜಿಗಳನ್ನು ದಿನಾಂಕ: 02-05-2025 ರ ಒಳಗೆ ಆಯಾ ವಲಯಗಳ ಸಹಾಯಕ ಕಂದಾಯ ಅಧಿಕಾರಿ (ಕಲ್ಯಾಣ) ರವರ ಕಚೇರಿಗಳಲ್ಲಿ ಸಲ್ಲಿಸಬಹುದಾಗಿದೆ ಎಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಕಲ್ಯಾಣ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನು ಸಾರ್ವಜನಿಕರು ಅಗತ್ಯ ದಾಖಲೆಗಳೊಂದಿಗೆ ಈ ಕಲ್ಯಾಣ ಕಾರ್ಯಕ್ರಮಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡುವ ಮೂಲಕ 12ಕ್ಕೂ ಹೆಚ್ಚು ಯೋಜನೆಗಳನ್ನು ಪಡೆದುಕೊಳ್ಳುವುದಕ್ಕೆ ಅವಕಾಶ ನೀಡಲಾಗಿದೆ. ಕೊನೆಯ ಕ್ಷಣದ ವರೆಗೆ ಕಾಯದೆ ಈಗಲೇ ಅರ್ಜಿಗಳನ್ನು ಸಲ್ಲಿಕೆ ಮಾಡಿ.

ಬಿಬಿಎಂಪಿ ಚುನಾವಣೆಗೆ ಜೆಡಿಎಸ್‌ನಿಂದ ಸ್ಪರ್ಧಿಸಲು ಎಲ್ಲ ರೀತಿಯಲ್ಲೂ ಸಿದ್ಧತೆ: ಎಚ್‌ಡಿಕೆ ಹೇಳಿಕೆ

Leave a Reply

Your email address will not be published. Required fields are marked *