ಬೆಂಗಳೂರಿನ ಆಸ್ತಿಗಳಿಗೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ತುಷಾರ್ ಗಿರಿನಾಥ್ ಅವರು ಪ್ರಮುಖ ಸೂಚನೆಯೊಂದನ್ನು ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಈಗಾಗಲೇ ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿರುವವರನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ತರುವ ನಿಟ್ಟಿನಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇದೀಗ ಬೆಂಗಳೂರಿನ ಆಸ್ತಿಗಳನ್ನು ಟ್ಯಾಕ್ಸ್ ನೆಟ್‌ಗೆ ತರುವುದಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಹೇಳಿದ್ದಾರೆ. ಅದೇನು ಎನ್ನುವ ವಿವರ ಇಲ್ಲಿದೆ.
ಬೆಂಗಳೂರಿನಲ್ಲಿ ಸಾವಿರಾರು ಆಸ್ತಿಗಳು ಆಸ್ತಿ ವ್ಯಾಪ್ತಿಯಿಂದ ಹೊರಗುಳಿದಿವೆ. ಈ ಆಸ್ತಿಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ತರಬೇಕು ಎನ್ನುವ ನಿಟ್ಟಿನಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯಿಂದ ಹೊರಗುಳಿದ ಆಸ್ತಿಗಳನ್ನು ಟ್ಯಾಕ್ಸ್‌ನೆಟ್‌ಗೆ ಸೇರಿಸಬೇಕು. ಈ ಸಂಬಂಧ ಬೆಂಗಳೂರಿನ ಎಂಟು ವಲಯಗಳ ವ್ಯಾಪ್ತಿಯಲ್ಲಿ ಎಷ್ಟು ಆಸ್ತಿಗಳು ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿವೆ ಎಂಬುದನ್ನು ಗುರುತಿಸಿ ಎಲ್ಲಾ ಆಸ್ತಿಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ತರಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಆಸ್ತಿ ವ್ಯಾಪ್ತಿ ಎಂದರೇನು: ಆಸ್ತಿ ತೆರಿಗೆ ವ್ಯಾಪ್ತಿಗೆ ಸೇರಿಸುವುದು ಎನ್ನುವುದು ಪ್ರಮುಖವಾಗಿ ಆಸ್ತಿ ತೆರಿಗೆ ಪಾವತಿ ಮಾಡದೆ ಇರುವ ಆಸ್ತಿಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ಸೇರಿಸುವುದೇ ಆಗಿದೆ. ಒಮ್ಮೆ ಆಸ್ತಿ ತೆರಿಗೆ ವ್ಯಾಪ್ತಿಗೆ ಆಸ್ತಿಗಳು ಬರುವುದರಿಂದ ನಿರಂತರವಾಗಿ ಬಿಬಿಎಂಪಿಗೆ ಆದಾಯ ಬರಲಿದೆ. ಹೌದು ಕೆಲವು ಆಸ್ತಿಗಳು ಆಸ್ತಿ ತೆರಿಗೆ ವ್ಯಾಪ್ತಿಯಿಂದ ದೂರ ಉಳಿದಿದ್ದು. ಅವುಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ಸೇರಿಸಿದರೆ ಕೋಟ್ಯಾಂತರ ರೂಪಾಯಿ ಆದಾಯ ಬರಲಿದೆ. ಆಸ್ತಿ ತೆರಿಗೆ ವ್ಯಾಪ್ತಿಗೆ ಸೇರಿದರೆ ಆಸ್ತಿದಾರರು ಕಡ್ಡಾಯವಾಗಿ ಆಸ್ತಿ ತೆರಿಗೆ ಪಾವತಿ ಮಾಡಬೇಕಾಗುತ್ತದೆ.
ಅನಧಿಕೃತ ಜಾಹೀರಾತು ಹಾಕಿದರೆ ಎಫ್‌ಐಆರ್: ಇನ್ನು ಬೆಂಗಳೂರಿನಲ್ಲಿ ಆಸ್ತಿ ನೆಟ್ ಟ್ಯಾಕ್ ವ್ಯಾಪ್ತಿಗೆ ಸೇರಿಸಬೇಕು ಎನ್ನುವುದರೊಂದಿಗೆ ಅನಧಿಕೃತ ಜಾಹೀರಾತುಗಳ ಮೇಲೆಯೂ ಬಿಬಿಎಂಪಿ ಕಣ್ಣಿಟ್ಟಿದೆ. ಬೆಂಗಳೂರಿನಲ್ಲಿ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿರುವವರ ಮೇಲೆ ಎಫ್ಐಆರ್ ದಾಖಲಿಸುವುದಕ್ಕೆ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೂಚನೆ ನೀಡಿದ್ದಾರೆ.
ಖಾತಾ ಇಲ್ಲದ ಆಸ್ತಿದಾರರಿಗೆ ಹೊಸ ಖಾತಾ ಮಾಡಿಕೊಳ್ಳಲು ಹೊಸ ವೆಬ್ಸೈಟ್ ತೆರೆದ ಬಿಬಿಎಂಪಿ: ಬೇಕಾಗುವ ದಾಖಲೆಗಳೇನು?


