BBMP
Loading ...

BBMP News

ಬೆಂಗಳೂರು : ರಾಜ್ಯ ಸರ್ಕಾರ ಈಗಾಗಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ಅನೂರ್ಜಿತಗೊಳಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ರಚನೆ ಮಾಡಿದೆ. ಈ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅನುಗುಣವಾಗಿ ವಾರ್ಡ್‌ಗಳ ಮರುವಿಂಗಡಣಾ ಆಯೋಗವು ಆಗಸ್ಟ್ 3 ರಿಂದ ವಾರ್ಡ್‌ಗಳ ಮರುರಚನೆ, ಗಡಿ ಗುರುತಿಸುವಿಕೆ ಕೆಲಸವನ್ನು ಆರಂಭಿಸಲಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಅವರು ವಿಧಾನಸೌಧದಲ್ಲಿ ಮಂಗಳವಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಬಿಬಿಎಂಪಿ) ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಆಯೋಗವು ತಾತ್ಕಾಲಿಕ ವಾರ್ಡ್ ಗಳು, ಗಡಿ ಗುರುತಿಸುವಿಕೆ, ತಕರಾರು ಅರ್ಜಿಗಳ ಸ್ವೀಕಾರ ಮತ್ತಿತರ ಕೆಲಸಗಳ ಅಂತಿಮ ನಿರ್ಣಯಗಳನ್ನು ಒಂದು ತಿಂಗಳ ಕಾಲ ಅಂದರೆ ಸೆಪ್ಟೆಂಬರ್‌ 1 ರವರೆಗೆ ನಿರ್ವಹಿಸಲಿದೆ. ಆನಂತರ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ತದನಂತರ ಈ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು’ ಎಂದು ಹೇಳಿದರು.

ಈ ಎಲ್ಲಾ ಪ್ರಕ್ರಿಯೆ ಮುಗಿದ ತಕ್ಷಣ ನಾವು ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತೇವೆ. ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಂಡು, ವೇಳಾಪಟ್ಟಿ ನಿಗದಿ ಮಾಡಿ ಸಾರ್ವಜನಿಕರಿಗೆ ಮಾಹಿತಿ ನೀಡುತ್ತೇವೆ’ ಎಂದು ತಿಳಿಸಿದರು.‘

ಇ-ಸ್ವತ್ತು ನಿರ್ವಹಣೆಗೆ ಸಂಬಂಧಿಸಿದ ಕಾರ್ಯ ವಿಧಾನದ ಬಗ್ಗೆ ಪ್ರಮಾಣಿತ ಕಾರ್ಯಾಚರಣೆ ವಿಧಾನ ಬಿಡುಗಡೆ

Leave a Reply

Your email address will not be published. Required fields are marked *