ChatGPT Image Oct 3, 2026, 08_41_04 PM-modified
GREATER BENGALURU NEWS 9
BNG Police

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಕೆಲವು ತೃತೀಯಲಿಂಗಿ ವ್ಯಕ್ತಿಗಳಿಂದ ಕಿರುಕುಳ, ಬಲವಂತವಾಗಿ ಹಣ ವಸೂಲಿ, ಬೆದರಿಕೆ ಹಾಗೂ ಸಂಚಾರಕ್ಕೆ ಅಡ್ಡಿಪಡಿಸುತ್ತಿರುವ ಕುರಿತು ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸರು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ.

ದೂರು ಬಂದಾಗ ತಕ್ಷಣ ಸತ್ಯಾಸತ್ಯತೆ ಪರಿಶೀಲಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ನಗರದ ಎಲ್ಲ ಪೊಲೀಸ್ ಠಾಣೆಗಳ ಅಧಿಕಾರಿ ಮತ್ತು ಸಿಬ್ಬಂದಿಗೆ ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ.

ದೂರು ಬಂದರೆ ಕೂಡಲೇ ಪರಿಶೀಲನೆ
ಆಕ್ರಮಣಕಾರಿ ರೀತಿಯಲ್ಲಿ ಹಣ ಕೇಳುವುದು ಅಥವಾ ವಸೂಲಿ ಮಾಡುವುದು, ವಾಹನ ಹಾಗೂ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸುವುದು, ಬೆದರಿಕೆ ಹಾಕುವುದು ಸೇರಿದಂತೆ ಕಾನೂನು ಉಲ್ಲಂಘನೆಯ ಬಗ್ಗೆ ದೂರು ಬಂದರೆ ಸ್ಥಳೀಯ ಪೊಲೀಸರು ತಕ್ಷಣ ಪರಿಶೀಲನೆ ನಡೆಸಬೇಕು. ಆರೋಪ ಸತ್ಯವೆಂದು ಕಂಡುಬಂದರೆ ಕಾನೂನಿನ ಅನ್ವಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

ಸಿಗ್ನಲ್, ಮಾರುಕಟ್ಟೆ, ಬಸ್ ನಿಲ್ದಾಣಗಳಲ್ಲಿ ನಿಗಾ
ಸಂಚಾರ ಸಿಗ್ನಲ್‌ಗಳು, ಮಾರುಕಟ್ಟೆಗಳು, ಬಸ್ ಹಾಗೂ ರೈಲು ನಿಲ್ದಾಣಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಪ್ರದೇಶಗಳಲ್ಲಿ ನಿಗಾ ಹೆಚ್ಚಿಸಲು ಸೂಚಿಸಲಾಗಿದೆ.

ಅದೇ ರೀತಿ ಮನೆಗಳು ಅಥವಾ ಮದುವೆ ಸೇರಿದಂತೆ ವಿವಿಧ ಸಮಾರಂಭಗಳು ನಡೆಯುವ ಸ್ಥಳಗಳಿಗೆ ತೆರಳಿ ಸಾರ್ವಜನಿಕರಿಗೆ ತೊಂದರೆ ನೀಡುವುದು, ಬೆದರಿಕೆ ಹಾಕುವುದು ಅಥವಾ ಬಲವಂತವಾಗಿ ಹಣ ವಸೂಲಿ ಮಾಡುವಂತಹ ಕೃತ್ಯಗಳ ಕುರಿತು ದೂರು ಬಂದರೆ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

Leave a Reply

Your email address will not be published. Required fields are marked *