BBMP
Loading ...

Congress Leader

ಬೆಂಗಳೂರು: ಅಶೋಕನಗರದ ಗರುಡಾ ಮಾಲ್ ಬಳಿ ತಡರಾತ್ರಿ 1 ಗಂಟೆ ಸುಮಾರಿಗೆ ಕಾಂಗ್ರೆಸ್​ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್​ ಮುಖಂಡ.

ಶೇಖ್ ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ. ತಡರಾತ್ರಿ 1 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಹೈದರ್ ಅಲಿ ಲೈವ್ ಬ್ಯಾಂಡ್‌ನಿಂದ ರಾತ್ರಿ ಸ್ನೇಹಿತನ ಜೊತೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಆರೋಪಿಗಳು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ಅಡ್ಡಗಟ್ಟಿಕೊಲೆ ಮಾಡಿದ್ದಾರೆ.

ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿ ಅಶೋಕ ನಗರ ಠಾಣೆ ಪೊಲೀಸರು ಗಾಯದ ಮಡುವಲ್ಲಿ ಬಿದ್ದ ಹೈದರ್ ಅಲಿಯನ್ನು ಕೂಡಲೆ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದ ಹೈದರ್ ಅಲಿ ಮೃತಪಟ್ಟಿದ್ದನು. ವಿಚಾರ ತಿಳಿದು ಹೈದರ್​ ಅಲಿಯ ಬೆಂಬಲಿಗರು ಬೌರಿಂಗ್ ಆಸ್ಪತ್ರೆ ಬಳಿ ಜಮಾಯಿಸಿ ಲಾಂಗು, ಮಚ್ಚು ಹಿಡಿದು ಆಸ್ಪತ್ರೆ ಬಳಿ ಝಳಪಿಸಿದರು. ಬೌರಿಂಗ್ ಆಸ್ಪತ್ರೆ ಗೇಟ್ ತಳ್ಳಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿದ್ದ ಅಶೋಕನಗರ ಠಾಣೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು.

ಸದ್ಯ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಶೇಖ್ ಹೈದರ್ ಅಲಿ ಶಾಸಕ ಎನ್.ಎ.ಹ್ಯಾರಿಸ್ ಜೊತೆ ಗುರುತಿಸಿಕೊಂಡಿದ್ದರು. ಹೈದರ್ ಅಲಿ ಹ್ಯಾರಿಸ್ ಪರ ಪ್ರಚಾರದಲ್ಲಿ ಭಾಗಿಯಾಗುತ್ತಿದ್ದರು. ಘಟನೆ ಸಂಬಂಧ ಅಶೋಕನಗರ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದೆ. ಕೊಲೆ ಆರೋಪಿಗಳ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ವಿದ್ಯುತ್​ ರಿಪೇರಿ ಕೆಲ್ಸ: ವಿಜಯನಗರ, ಗೋವಿಂದರಾಜನಗರ ಸೇರಿ ಸುತ್ತಲಿನ ಪ್ರದೇಶಗಳಲ್ಲಿ ನಾಳೆ ಕರೆಂಟ್​​ ಇರಲ್ಲ

Leave a Reply

Your email address will not be published. Required fields are marked *