Greater Bengaluru News9 : ಬೆಸ್ಕಾಂ ವ್ಯಾಪ್ತಿಯಲ್ಲಿ (BESCOM) ಆಪ್ಟಿಕಲ್ ಪೋರ್ಟ್ ಪ್ರೋಬ್ ತಂತ್ರಜ್ಞಾನ ಬಳಸಿ ಗ್ರಾಹಕರಿಗೆ ವಿದ್ಯುತ್ ಬಿಲ್ ನೀಡಲಾಗುತ್ತಿದ್ದು, ಮಾಪಕ ಓದುಗರು ಮೀಟರ್ ರೀಡಿಂಗ್ ಮಾಡಲು ಅನುಕೂಲವಾಗುವಂತೆ ಗ್ರಾಹಕರು ತಮ್ಮ ಸ್ಥಾವರಗಳ ವಿದ್ಯುತ್ ಮೀಟರ್‌ಗಳನ್ನು ಕೈಗೆಟಕುವ ಸ್ಥಳಗಳಲ್ಲಿ ಅಳವಡಿಸಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ.
ಬೆಸ್ಕಾಂ ವ್ಯಾಪ್ತಿಯಲ್ಲಿ ಕೆಲವು ವಿದ್ಯುತ್ ಸ್ಥಾವರಗಳ ಮೀಟರ್‌ಗಳನ್ನು ಎತ್ತರದ ಪ್ರದೇಶದಲ್ಲಿ ಅಳವಡಿಸಿರುವುದರಿಂದ ಅಪ್ಟಿಕಲ್ ಪೋರ್ಟ್ ಪ್ರೋಬ್ ಮೂಲಕ ಮೀಟರ್ ರೀಡಿಂಗ್ ಮಾಡಲು ತೊಂದರೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯುತ್ ಮೀಟರ್‌ಗಳನ್ನು ನೆಲಮಟ್ಟದಿಂದ 5.0 ರಿಂದ 5.5 ಅಡಿ ಎತ್ತರದಲ್ಲಿ ಅಳವಡಿಸಿಕೊಳ್ಳುವಂತೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ.
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ (KPTCL) ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11ಕೆವಿ ಪುಟ್ಟೇನಹಳ್ಳಿ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಅ.28ರಂದು ಮಂಗಳವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.


