BBMP
Loading ...

BNG Rain

Greater Bengaluru News9 : ನೈಋತ್ಯ ಮಾನ್ಸೂನ್‌ಗಳ ಕಾಲ ಆರಂಭಗೊಂಡರು, ರಾಜ್ಯದಲ್ಲಿ ಮಳೆಯ ಅಭಾವ ಎದುರಾಗಿದೆ. ಇದೇ ರೀತಿ ಮಳೆ ಕೊರತೆ ಮುಂದುವರೆದರೆ, ಮುಂದಿನ 3 ತಿಂಗಳಲ್ಲಿ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. ಪ್ರಮುಖ ಜಲಾಶಯಗಳಾದ ಕೆಆರ್‌ಎಸ್, ಕಬಿನಿ, ಹೇಮಾವತಿ ಹಾಗೂ ಆಲಮಟ್ಟಿ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ನಿರಂತರವಾಗಿ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆ ಎದುರಾಗುವ ಸಾದ್ಯತೆಗಳು ಹೆಚ್ಚಾಗಿವೆ ಎನ್ನಲಾಗುತ್ತಿದೆ.

ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ಪ್ರಮುಖ ಜಲಾಶಯಗಳ ನೀರಿನ ಸಂಗ್ರಹ ವೇಗವಾಗಿ ಇಳಿಕೆಯಾಗುತ್ತಿದೆ. ಇದೇ ಪರಿಸ್ಥಿತಿ ಮುಂದುವರೆದರೆ ಮುಂದಿನ ಮೂರು ತಿಂಗಳಲ್ಲಿ ಬೆಂಗಳೂರಿಗೆ ಕುಡಿಯುವ ನೀರಿನ ಕೊರತೆ ಎದುರಾಗುವ ಸಾಧ್ಯತೆ ಇದೆ.

ಈ ಕುರಿತು ಕಳವಳ ವ್ಯಕ್ತಪಡಿಸಿರುವ ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ, ಕಳೆದ ತಿಂಗಳು ಮುಂಗಾರು ನಿರೀಕ್ಷಿತ ಪ್ರಮಾಣದ ಮಳೆಯನ್ನೇ ತರಲಿಲ್ಲ. ಈ ತಿಂಗಳಲ್ಲೂ ಮಳೆಯ ಕೊರತೆ ಮುಂದುವರಿದರೆ ರಾಜ್ಯವು ಗಂಭೀರ ಜಲ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಅದರ ಪರಿಣಾಮವಾಗಿ ಸೆಪ್ಟೆಂಬರ್‌ನಿಂದಲೇ ಬೆಂಗಳೂರಿನಲ್ಲಿ ನೀರಿನ ಅಭಾವ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.

ರಾಜ್ಯದ ಹಲವು ಜಲಾಶಯಗಳಲ್ಲಿ ನೀರಿನ ಸಂಗ್ರಹ ತೀವ್ರವಾಗಿ ಕುಸಿದಿದೆ. ಕೆಲವು ಜಲಾಶಯಗಳಲ್ಲಿ ನೀರಿನ ಮಟ್ಟ ಅತ್ಯಂತ ಕಡಿಮೆಯಾಗಿದ್ದು, ಕಳೆದ ಸುಮಾರು 100 ವರ್ಷಗಳಲ್ಲಿ ಕಂಡಿರದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಮಳೆಯ ಕೊರತೆಯಿಂದ ರಾಜ್ಯದ ಪ್ರಮುಖ ಕುಡಿಯುವ ನೀರಿನ ಮೂಲಗಳ ಮೇಲೆ ಒತ್ತಡ ಹೆಚ್ಚಿದ್ದು, ಮುಂದಿನ ದಿನಗಳಲ್ಲಿ ನೀರು ಪೂರೈಕೆಯ ಬಗ್ಗೆ ಆತಂಕ ಉಂಟಾಗಿದೆ.

ನೀರಿನ ಕೊರತೆಯನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು ಜಲ ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಈಗಾಗಲೇ ಕಾವೇರಿ ನೀರಾವರಿ ನಿಗಮಕ್ಕೆ ಬೆಂಗಳೂರಿನ ಕುಡಿಯುವ ನೀರಿನ ಅಗತ್ಯಕ್ಕಾಗಿ 9.56 ಟಿಎಂಸಿ ನೀರನ್ನು ಮೀಸಲಿಡುವಂತೆ ಮನವಿ ಸಲ್ಲಿಸಿದೆ.

ಪ್ರಸ್ತುತ ಬೆಂಗಳೂರಿನ ಜನಸಂಖ್ಯೆ ಸುಮಾರು 1.50 ಕೋಟಿ. ನಗರದಲ್ಲಿ 11.50 ಲಕ್ಷಕ್ಕೂ ಹೆಚ್ಚು ನೀರಿನ ಸಂಪರ್ಕಗಳಿವೆ. ಪ್ರತಿದಿನ BWSSB ಸುಮಾರು 2,225 MLD (MLD- ಮಿಲಿಯನ್ ಲೀಟರ್ ಪ್ರತಿ ದಿನ) ನೀರನ್ನು ಪೂರೈಸುತ್ತಿದೆ. ಇದರಲ್ಲಿ ಕಾವೇರಿ 5 ಯೋಜನೆಯಡಿ 775 ಎಂಎಲ್‌ಡಿ ನೀರು ಪೂರೈಕೆಯಾಗುತ್ತಿದ್ದು, ನಗರದ ಒಟ್ಟಾರೆ ನೀರು ಸರಬರಾಜು ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿದೆ.

Leave a Reply

Your email address will not be published. Required fields are marked *