BBMP
Loading ...

BESCOM

ಚಿತ್ರದುರ್ಗ: ಕಾಮಗಾರಿಯ ಕಾರ್ಯಾದೇಶ ನೀಡಲು ವಿದ್ಯುತ್‌ ಗುತ್ತಿಗೆದಾರರೊಬ್ಬರಿಂದ ₹ 3.5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಕಾರ್ಯಪಾಲಕ ಎಂಜಿನಿಯರ್‌ ತಿಮ್ಮರಾಯಪ್ಪ ಅವರನ್ನು ಗುರುವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ತಿಮ್ಮರಾಯಪ್ಪ ಕಾಮಗಾರಿ ಮೊತ್ತದ ಶೇ 10ರಷ್ಟು ಹಣವನ್ನು ಕಮೀಷನ್‌ ನೀಡಬೇಕು ಎಂದು ಬೇಡಿಕೆಯೊಡ್ಡಿದ್ದರು. ಈ ಕುರಿತು ಹೊಳಲ್ಕೆರೆ ತಾಲ್ಲೂಕು ದುಮ್ಮಿ ಗ್ರಾಮದ ವಿದ್ಯುತ್‌ ಗುತ್ತಿಗೆದಾರ ಎಸ್‌.ಆರ್‌.ಸಂಜಯ್‌ ಬುಧವಾರ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಗುರುವಾರ ದಾಳಿ ನಡೆಸಿ ಲಂಚ ಸ್ವೀಕರಿಸುತ್ತಿದ್ದಾಗಲೇ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಲಂಚದ ಹಣವನ್ನು ಜಪ್ತಿ ಮಾಡಿದ್ದಾರೆ.

ಲೊಕಾಯುಕ್ತ ಎಸ್ಪಿ ವಾಸುದೇವರಾಮ್‌, ಡಿವೈಎಸ್‌ಪಿ ಮೃತ್ಯುಂಜಯ, ಇನ್‌ಸ್ಪೆಕ್ಟರ್‌ ಬಸವರಾಜು ದಾಳಿಯಲ್ಲಿ ಭಾಗವಹಿಸಿದ್ದರು. ಆರೋಪಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Leave a Reply

Your email address will not be published. Required fields are marked *