BBMP
Loading ...

BESCOM Worker

ಚನ್ನಪಟ್ಟಣ: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಲ್ಲೂಕಿನ ಚಕ್ಕೆರೆ ಬಳಿಯ ಪಾರೇತೆಕ್ಲು ಗ್ರಾಮದ ರಾಮೇಗೌಡ (43) ಅವರು ಸೋಮವಾರ ಮೃತಪಟ್ಟಿದ್ದಾರೆ.

ಕಳೆದ ವಾರ ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅವರು ಸೋಮವಾರ ನಿಧನರಾಗಿದ್ದಾರೆ. ಇವರು ಬೆಸ್ಕಾಂನಲ್ಲಿ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರಿಗೆ ಪತ್ನಿ, ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ಗ್ರಾಮದ ರುದ್ರಭೂಮಿಯಲ್ಲಿ ಸಂಜೆ ನೆರವೇರಿತು.

ಇಂದಿನಿಂದ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯ: ಸ್ಮಾರ್ಟ್​ ಮೀಟರ್​ ಹೆಸರಲ್ಲಿ ಗ್ರಾಹಕರಿಂದ 9,000 ರೂಪಾಯಿ ದರೋಡೆ

Leave a Reply

Your email address will not be published. Required fields are marked *