BBMP
Loading ...

ಚಿಕ್ಕಬಳ್ಳಾಪುರ: ವಿದ್ಯುತ್ ಸರಿಪಡಿಸುವ ವೇಳೆ ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಕಂಬದಲ್ಲೇ ಮೃತಪಟ್ಟಿರುವ ಘಟನೆ ಮಂಚೇನಹಳ್ಳಿ ತಾಲೂಕಿನ ಬಿಸಲಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.

ಮೃತ ಬೆಸ್ಕಾಂ ಸಿಬ್ಬಂದಿಯನ್ನು ಮೂಲತಃ ಚಿತ್ರದುರ್ಗದ ಉದಯ್(28) ಎಂದು ಗುರುತಿಸಲಾಗಿದೆ. ಇವರು ಮಂಚೇನಹಳ್ಳಿ ವ್ಯಾಪ್ತಿಯಲ್ಲಿ ಲೈನ್ ಮ್ಯಾನ್ ಆಗಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದರು. ಇಂದು ಟ್ರಾನ್ಸ್ ಫಾರ್ಮರ್ ನಲ್ಲಿ ಲೈನ್ ಜಂಪ್ ಆದ ಹಿನ್ನಲೆಯಲ್ಲಿ ಲೈನ್ ಸರಿಪಡಿಸುವ ವೇಳೆ ವಿದ್ಯುತ್ ಹರಿದು ಕಂಬದಲ್ಲಿಯೇ ಮೃತಪಟ್ಟಿದ್ದಾರೆ.

ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವ ವರೆಗೂ ವಿದ್ಯುತ್ ಕಂಬದ ಮೇಲೆಯೇ ಉದಯ್ ಮೃತ ದೇಹ ನೇತಾಡುತ್ತಿತ್ತು ಎನ್ನಲಾಗಿದೆ. ಬೆಳಗ್ಗೆ ಸುಮಾರು 9 ಗಂಟೆ ವೇಳೆಗೆ ಘಟನೆಯ ಬಗ್ಗೆ ಮಾಹಿತಿ ನೀಡಿಯೂ ತಡವಾಗಿ ಸ್ಥಳಕ್ಕೆ ಭೇಟಿ ನೀಡಿದ ಬೆಸ್ಕಾಂ ಅಧಿಕಾರಿಗಳು, ಪೊಲೀಸರ ವಿರುದ್ಧ ಸ್ಥಳೀಯ ರೈತ ಸಂಘಟನೆಗಳು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಬೆಸ್ಕಾಂ ಕಚೇರಿ ಬಳಿ ರೈತ ಸಂಘಟನೆ ಪ್ರತಿಭಟನೆ ಮಾಡಿ ಲೈನ್‌ ಮ್ಯಾನ್ ಉದಯ್ ಸಾವಿಗೆ ಬೆಸ್ಕಾಂ ಅಧಿಕಾರಿಗಳ ಕಾರಣ ಎಂದು ಆರೋಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ‌ ದಿನವಷ್ಟೇ ಗೌರಿಬಿದನೂರು ವ್ಯಾಪ್ತಿಯಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿ ಕಾರು ಅಪಘಾತದಲ್ಲಿ ಮೃತಪಟ್ಟಿದ್ದರು.

ಚಂದನ್ ಶೆಟ್ಟಿ-ನಿವೇದಿತಾ ಡಿವೋರ್ಸ್‌: ಸ್ಟಾರ್ ಜೋಡಿಯ ಬಾಳಲ್ಲಿ ಏನಾಯ್ತು?

Leave a Reply

Your email address will not be published. Required fields are marked *