BBMP
Loading ...

Siddaramaiah

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಮೇಲ್ಮನವಿ ಸಲ್ಲಿಸಿದ್ದರು. ಇಂದು ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಮೇಲ್ಮನವಿ ವಿಚಾರಣೆ ನಡೆದಿದ್ದು, ಮುಡಾ ನಿವೇಶನ ಹಂಚಿಕೆ ಅಕ್ರಮದಲ್ಲಿ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್​ಗೆ ಅನುಮತಿಗೆ ತಡೆಗೆ ವಿಭಾಗೀಯ ನಿರಾಕರಿಸಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣವನ್ನು ತನಿಖೆ ನಡೆಸಲು ರಾಜ್ಯಪಾಲರು ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಿದ್ಧರಾಮಯ್ಯ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಏಕಸದಸ್ಯ ನ್ಯಾಯಪೀಠವು ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದಿತ್ತು. ಹೀಗಾಗಿ ಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ ತೀರ್ಪು ರದ್ದುಗೊಳಿಸುವಂತೆ ವಿಭಾಗೀಯ ನ್ಯಾಯಪೀಠಕ್ಕೆ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿದ್ದರು.

ಇದೀಗ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯಪೀಠ, ಮುಡಾ ನಿವೇಶನ ಹಂಚಿಕೆ ಅಕ್ರಮದಲ್ಲಿ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್‌ ಗೆ ಅನುಮತಿಗೆ ತಡೆಗೆ ವಿಭಾಗೀಯ ನಿರಾಕರಿಸಿದೆ.

ನಟ ದರ್ಶನ್​ಗೆ ಬಿಗ್ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ ರಾಜ್ಯ ಸರ್ಕಾರ!

Leave a Reply

Your email address will not be published. Required fields are marked *