BBMP
Loading ...

Free Bus

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಹಮ್ಮಿಕೊಂಡಿದ್ದು ಈ ಹಿನ್ನೆಲೆಯಲ್ಲಿ ನಾಳೆಯಿಂದ ರಸ್ತೆಗೆ ಬಸ್ ಇಳಿಯುವುದು ಬಹುತೇಕ ಡೌಟ್ ಎನ್ನಲಾಗುತ್ತಿದೆ. ಇದರ ಬೆನ್ನೆಲೆ ನೌಕರರಿಗೆ ಸಾರಿಗೆ ಇಲಾಖೆ ಶಾಕ್ ನೀಡಿದ್ದು ಮುಷ್ಕರದಲ್ಲಿ ಪಾಲ್ಗೊಳ್ಳುವ ನೌಕರರ ರಜೆ ರದ್ದುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಹೌದು ನಾಳೆಯಿಂದ ಸಾರಿಗೆ ಸಿಬ್ಬಂದಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನಾಳೆಯಿಂದ ನೌಕರರ ರಜೆ ರದ್ದು ಮಾಡಿದ ಸಾರಿಗೆ ಇಲಾಖೆ. ಮುಷ್ಕರದಲ್ಲಿ ಭಾಗಿ ಆದರೆ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ. ಡ್ಯೂಟಿ ಮಾಡಿಲ್ಲ ಅಂದರೆ ಸಂಬಳ ನೀಡಲ್ಲ ಎಂದು ಸಾರಿಗೆ ಇಲಾಖೆ ನೌಕರರಿಗೆ ಎಚ್ಚರಿಕೆ ನೀಡಿದೆ.

ಇಂದು ಮಧ್ಯ ರಾತ್ರಿಯಿಂದಲೇ ಸಾರಿಗೆ ನೌಕರರ ಮುಷ್ಕರ ಆರಂಭ ಆಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಸಾರಿಗೆ ನೌಕರರಿಗೆ ಯಾವುದೇ ರಜೆ ಇಲ್ಲ ನೌಕರರಿಗೆ ಯಾವುದೇ ರಜೆ ಮಂಜೂರು ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಗತ್ಯ ಬಿದ್ದರೆ ವೀಕ್ಲಿ ಆಫ್ ಕೂಡ ರದ್ದು ಮಾಡಲು ಅಧಿಕಾರಿಗಳಿಗೆ ಸಾರಿಗೆ ಇಲಾಖೆ ಸೂಚಿಸಿದೆ.

ಬೆಸ್ಕಾಂ ಗೋಲ್​ಮಾಲ್: ಕೋಟ್ಯಂತರ ರೂ. ಅವ್ಯವಹಾರ ಆರೋಪ, ಕೋಲಾರದಲ್ಲಿ ಪ್ರಕರಣ ದಾಖಲು

Leave a Reply

Your email address will not be published. Required fields are marked *