BBMP
Loading ...

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ ಗೆ ವಿಚಾರಣಾಧೀನ ಕೈದಿ ನಂಬರ್ 6106 ಕೊಟ್ಟಿದ್ದಾರೆ. ಆದರೆ, ಇದೀಗ ತನ್ನ ಒಂದು ವರ್ಷದ ಮಗುವಿಗೆ ಕೈದಿ ಬಟ್ಟೆ ಹಾಕಿಸಿ ಫೋಟೋ ಶೂಟ್‌ ಮಾಡಿಸಿದ್ದ ಅಭಿಮಾನಿಗೆ ನೋಟಿಸ್‌ ನೀಡಲು ಮಕ್ಕಳ ಹಕ್ಕುಗಳ ಆಯೋಗ ಸಿದ್ಧತೆ ನಡೆಸಿದೆ.

ಮಗುವಿಗೆ ಕೈದಿ ಬಟ್ಟೆ ಹಾಕಿಸಿ ಪೋಟೋ ಶೂಟ್‌ ಮಾಡಿದ್ದ ಪೋಷಕರಿಗೆ ಮಕ್ಕಳ ಹಕ್ಕುಗಳ ಆಯೋಗ ಬಿಗ್‌ ಶಾಕ್‌ ನೀಡಿದ್ದು, ಪೋಷಕರಿಗೆ ನೋಟಿಸ್‌ ನೀಡಲು ಮುಂದಾಗಿದೆ. ಈಗಾಗಲೇ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಆಯೋಗವು ಮಗುವಿಗೆ ಕೈದಿ ಬಟ್ಟೆ ಹಾಕಿರುವುದು ತಪ್ಪು ಹೀಗಾಗಿ ನೋಟಿಸ್‌ ನೀಡಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ಒಂದು ವರ್ಷದ ಮಗುವಿಗೆ ಖೈದಿ ನಂಬರ್ 6106 ನಂಬರ್ ಹಾಕಿ, ಕೈ ಕೋಳ ಮಾದರಿ, ಖೈದಿಗಳ ರೀತಿ ಬಿಳಿ ಬಟ್ಟೆ ಹಾಕಿ ಹುಟ್ಟುಹಬ್ಬ ಆಚರಿಸಿದ್ದೂ ಅಲ್ಲದೇ ಆ ಬಟ್ಟೆಯಲ್ಲಿ ಫೋಟೊ ಶೂಟ್ ಮಾಡಿಸಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

ಪೆಟ್ರೋಲ್, ಡೀಸೆಲ್, ಹಾಲಿನ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ಸರ್ಕಾರ ಚಿಂತನೆ

Leave a Reply

Your email address will not be published. Required fields are marked *