BBMP
Loading ...

Darshan

Greater Bengaluru News9 : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಈಗಾಗಲೇ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಟ್ರಯಲ್ ಶುರುವಾಗಿದ್ದು, ರೇಣುಕಾಸ್ವಾಮಿ ತಂದೆ-ತಾಯಿಯ ಹೇಳಿಕೆ ದಾಖಲಿಸಲಾಗುತ್ತಿದೆ. ಈ ಹೊತ್ತಲ್ಲೇ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಪ್ರಾಸಿಕ್ಯೂಷನ್ ವಿರುದ್ಧವೇ ರೇಣುಕಾಸ್ವಾಮಿ ತಾಯಿ ರತ್ನಪ್ರಭಾ ಹೇಳಿಕೆ ನೀಡಿದ್ದಾರೆ. ಹಿಂದಿನ ಹೇಳಿಕೆಗೂ ಈಗಿನ ಹೇಳಿಕೆಗೂ ದ್ವಂದ್ವ ಹಿನ್ನೆಲೆಯಲ್ಲಿ ರತ್ನಪ್ರಭಾರನ್ನು ಪ್ರತಿಕೂಲ ಸಾಕ್ಷಿಯಾಗಿ ಪರಿಗಣಿಸಲು ಎಸ್‌ಪಿಪಿ (SPP) ಮನವಿ ಮಾಡಿದ್ದಾರೆ. ಎಸ್‌ಪಿಪಿ ಪ್ರಸನ್ನಕುಮಾರ್ ಸಲ್ಲಿಸಿದ ಮನವಿ ಬಗ್ಗೆ ಸೋಮವಾರ ನಿರ್ಧಾರ ಆಗಲಿದೆ.

ರತ್ನಪ್ರಭಾ 8 ಅಂಶಗಳಲ್ಲಿ ಪ್ರಾಸಿಕ್ಯೂಷನ್ ವಿರುದ್ಧವೇ ವ್ಯತಿರಿಕ್ತ ಹೇಳಿಕೆ ಕೊಟ್ಟಿದ್ದಾರೆ. ಮಗನ ಮೊಬೈಲ್ ಬಗ್ಗೆ ಗೊತ್ತಿಲ್ಲ ಎಂದು ನ್ಯಾಯಾಲಯದಲ್ಲಿ ಹೇಳಿದ್ದು ಪೊಲೀಸರ ಮುಂದೆ ಇದೇ ಮೊಬೈಲ್ ಅಂತ ಹೇಳಿದ್ದರು. ಜೊತೆಗೆ ಹತ್ಯೆಯಾದ ದಿನ 2 ಬಾರಿ ರೇಣುಕಾಗೆ ಕರೆ ಮಾಡಿದ್ದರು. ಆದರೆ ಕರೆ ಮಾಡಿಲ್ಲ ಅಂತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದರು. ಈ ಎಲ್ಲಾ ಹೇಳಿಕೆಗಳ ಆಧಾರದಲ್ಲಿ ರತ್ನಪ್ರಭಾರನ್ನು ಪ್ರತಿಕೂಲ ಸಾಕ್ಷಿಯಾಗಿ ಪರಿಗಣಿಸಲು ಕೋರಲಾಗಿದೆ.

Leave a Reply

Your email address will not be published. Required fields are marked *