ಬಿಗ್ ಬಾಸ್ ಕನ್ನಡ ಹೊಸ ಸೀಸನ್ ಯಾವಾಗ ಶುರು ಆಗಲಿದೆ ಎಂದು ಕಾದಿದ್ದ ವೀಕ್ಷಕರಿಗೆಲ್ಲ ಇಂದು (ಸೆಪ್ಟೆಂಬರ್ 15) ದೊಡ್ಡ ಸುದ್ದಿ ಸಿಕ್ಕಿದೆ. ಅಲ್ಲದೇ ಈ ಸೀಸನ್ನಲ್ಲಿ ಆ್ಯಂಕರ್ ಬದಲಾಗುತ್ತಾರಾ ಎಂಬ ಅನುಮಾನಕ್ಕೂ ತೆರೆ ಬಿದ್ದಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 11’ ಕಾರ್ಯಕ್ರಮ ಸೆಪ್ಟೆಂಬರ್ 29ರಿಂದ ಆರಂಭ ಆಗಲಿದೆ. ಈ ಬಾರಿ ಕೂಡ ಕಿಚ್ಚ ಸುದೀಪ್ ಅವರೇ ಆ್ಯಂಕರ್ ಆಗಿ ಮುಂದುವರಿಯಲಿದ್ದಾರೆ. ಈ ಬಗ್ಗೆ ಅಪ್ಡೇಟ್ ನೀಡಲು ‘ಕಲರ್ಸ್ ಕನ್ನಡ’ ಟಿವಿಯಲ್ಲಿ ಹೊಸ ಪ್ರೋಮೋ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಕಿಚ್ಚ ಸುದೀಪ್ ಅವರು ಅಬ್ಬರಿಸಿದ್ದಾರೆ.
ಇಷ್ಟು ವರ್ಷಗಳ ಕಾಲ ಸುದೀಪ್ ಅವರು ಯಶಸ್ವಿಯಾಗಿ ಬಿಗ್ ಬಾಸ್ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದಾರೆ. ಅವರಿಂದಾಗಿ ಎಲ್ಲ 10 ಸೀಸನ್ಗಳಿಗೆ ಸ್ಟಾರ್ ಮೆರುಗು ಸಿಕ್ಕಿತು. ಈಗ ಸಡನ್ ಆಗಿ ಬೇರೆ ಆ್ಯಂಕರ್ ಬರುತ್ತಾರೆ ಎಂದರೆ ಅಭಿಮಾನಿಗಳು ಅದನ್ನು ಸ್ವೀಕರಿಸುವುದು ಕಷ್ಟ. ಹಾಗಿದ್ದರೂ ಕೂಡ ಕೆಲವು ಅನುಮಾನಗಳು ಹುಟ್ಟಿಕೊಂಡಿದ್ದವು. ಸುದೀಪ್ ಬದಲು ಬೇರೆಯವರು ಈ ಬಾರಿ ನಿರೂಪಣೆ ಮಾಡಬಹುದು ಎಂದು ಕೆಲವರು ಊಹಿಸಿದ್ದರು. ಆದರೆ ಅದು ನಿಜವಾಗಿಲ್ಲ.
‘ಗಿಚ್ಚಿ ಗಿಲಿಗಿಲಿ 3’ ಗ್ರ್ಯಾಂಡ್ ಫಿನಾಲೆಯ ಸಂಚಿಕೆಯ ನಡುವೆ ‘ಬಿಗ್ ಬಾಸ್ ಕನ್ನಡ ಸೀಸನ್ 11’ ಹೊಸ ಪ್ರೋಮೋ ಬಿತ್ತರ ಆಗಿದೆ. ಇದರಲ್ಲಿ ಸುದೀಪ್ ಅವರು ಖಡಕ್ ಆಗಿ ಡೈಲಾಗ್ ಹೊಡೆದಿದ್ದಾರೆ. ‘10 ವರ್ಷದಿಂದ ಒಂದು ಲೆಕ್ಕ, ಈಗಿಂದ ಬೇರೇನೇ ಲೆಕ್ಕ. ಇದು ಹೊಸ ಅಧ್ಯಾಯ’ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ. ಈ ಪ್ರೋಮೋ ನೋಡಿ ಸುದೀಪ್ ಅಭಿಮಾನಿಗಳಿಗೆ ಖುಷಿ ಆಗಿದೆ.
ಬಿಗ್ ಬಾಸ್ Promo ಹೇಗಿದೆ??
29ಕ್ಕೆ ನಿಮ್ಮ ನಿಮ್ಮುಂದೆ ಬರಲಿದೆ
ಬಿಗ್ ಬಾಸ್ ಅನ್ನೋ show ಗೆ ಸುದೀಪ್ ಸರ್ ಇರಲೇ ಬೇಕು #BBK11 #KicchaBOSS𓃵 #KicchaSudeep pic.twitter.com/h06sjqI2pj— Sampath (@sampath56798) September 15, 2024
ಪ್ರತಿ ವರ್ಷದಂತೆ ಈ ವರ್ಷ ಕೂಡ ಈಗಾಗಲೇ ಅನೇಕ ವ್ಯಕ್ತಿಗಳ ಹೆಸರು ಕೇಳಿಬರುತ್ತಿದೆ. ಈ ಬಾರಿ ಯಾರೆಲ್ಲ ಬಿಗ್ ಬಾಸ್ ಮನೆಯೊಳಗೆ ಕಾಲಿಡುತ್ತಾರೆ ಎಂಬುದನ್ನು ತಿಳಿಯುವ ಕೌತುಕ ನಿರ್ಮಾಣ ಆಗಿದೆ. ಸಿನಿಮಾ ಸೆಲೆಬ್ರಿಟಿಗಳು, ಕಿರುತೆರೆಯಲ್ಲಿ ಖ್ಯಾತಿ ಗಳಿಸಿದವರು, ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದವರು, ಪತ್ರಿಕೋದ್ಯಮದ ಖ್ಯಾತನಾಮರು.. ಹೀಗೆ ವಿವಿಧ ಕ್ಷೇತ್ರಗಳಿಂದ ಸ್ಪರ್ಧಿಗಳು ಬರಲಿದ್ದಾರೆ. ‘ಕಲರ್ಸ್ ಕನ್ನಡ’ ಹಾಗೂ ‘ಜಿಯೋ ಸಿನಿಮಾ’ ಮೂಲಕ ಈ ಶೋ ಪ್ರಸಾರ ಆಗಲಿದೆ. ಸೆ.29ರ ಭಾನುವಾರ ಗ್ರ್ಯಾಂಡ್ ಓಪನಿಂಗ್ ಆಗಲಿದೆ.
ನಕಲಿ ದೂರು ದಾಖಲಿಸಿ ಅಮಾಯಕರನ್ನು ಜೈಲಿಗಟ್ಟಿದ್ದ ಬನಶಂಕರಿ ಠಾಣೆಯ PSI ಸೇರಿ ನಾಲ್ವರು ಅಧಿಕಾರಿಗಳು ಅಮಾನತು


