BBMP
Loading ...

Bihar Election

Greater Bengaluru News9 : ಬಿಹಾರ ವಿಧಾನಸಭಾ ಚುನಾವಣೆಗೆ ಕೌಂಟ್‌ಡೌನ್ ಶುರುವಾಗಿದ್ದು, ಭಾರತೀಯ ಚುನಾವಣಾ ಆಯೋಗ ಇಂದು ಬಿಹಾರ ವಿಧಾನಸಭಾ ಚುನಾವಣೆಗೆ 17 ಮುಹೂರ್ತ ನಿಗದಿ ಮಾಡಿದೆ.

ನಿನ್ನೆಯಷ್ಟೇ ಸುದ್ದಿ ಗೋಷ್ಠಿ ನಡೆಸಿದ್ದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು, ಚುನಾವಣಾ ದಿನಾಂಕ ಘೋಷಣೆಗೂ ಮುನ್ನ ಬಿಹಾರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅನೇಕ ಮಾಹಿತಿಗಳನ್ನು ಬಿಚ್ಚಿಟ್ಟರು. ಜೊತೆಗೆ ನವೆಂಬರ್‌ 22ರ ಒಳಗೆ ಬಿಹಾರ ಚುನಾವಣೆಯ ಎಲ್ಲ ಪ್ರಕ್ರಿಯೆಗಳು ಮುಗಿಯಲಿದೆ ಎಂದು ಹೇಳಿದ್ದರು. ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಚುನಾವಣೆ ಯಾವಾಗ ನಡೆಯಲಿದೆ ಅನ್ನೋದನ್ನು ಬಹಿರಂಗಪಡಿಸಿದ್ದಾರೆ.

ಬಿಹಾರದಲ್ಲಿ ಮತದಾನ, ಫಲಿತಾಂಶ ಯಾವಾಗ?
ಸುದ್ದಿಗೋಷ್ಠಿಯಲ್ಲಿ ಚುನಾವಣೆಯ ವಿವರಗಳನ್ನು ತಿಳಿಸಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು, ಬಿಹಾರದ 243 ವಿಧಾನಸಭಾ ಸ್ಥಾನಗಳಿಗೆ ಒಟ್ಟು ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತದ ಮತದಾನ ನವೆಂಬರ್ 6ರಂದು ನಡೆದರೆ, ಎರಡನೇ ಹಂತದ ಮತದಾನ 11ರಂದು ನಡೆಯಲಿದೆ. ನವೆಂಬರ್ 14ರಂದು ಫಲಿತಾಂಶ ನಡೆಯಲಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *