BBMP
Loading ...

Biklu

Greater Bengaluru News9: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರಿಗೆ ಗುರುವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಿಗ್ ರಿಲೀಫ್ ನೀಡಿದ್ದು, ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಜಾಮೀನು ಕೋರಿ ಭೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು, ಎರಡು ಲಕ್ಷ ರೂಪಾಯಿ ಬಾಂಡ್ ಮತ್ತು ಅಷ್ಟೇ ಮೊತ್ತದ ಇಬ್ಬರ ಶ್ಯೂರಿಟಿ, ಸಾಕ್ಷ್ಯಾಧಾರ ನಾಶಪಡಿಸುವಂತಿಲ್ಲ, ಸಾಕ್ಷಿಗಳನ್ನು ಬೆದರಿಸುವಂತಿಲ್ಲ, ಕೋರ್ಟ್ ಅನುಮತಿಯಿಲ್ಲದೇ ವ್ಯಾಪ್ತಿ ಬಿಟ್ಟು ತೆರಳುವಂತಿಲ್ಲ ಎಂಬ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದ್ದಾರೆ.

ಕಳೆದ ವರ್ಷ ಜುಲೈನಲ್ಲಿ ಭಾರತಿ ನಗರದಲ್ಲಿ ಬಿಕ್ಲು ಶಿವನನ್ನು ಶಸ್ತ್ರಸಜ್ಜಿತ ದಾಳಿಕೋರರು ಕೊಚ್ಚಿ ಕೊಲೆ ಮಾಡಿದ್ದರು. ಹಿಂದಿನ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣದ ಎಫ್‌ಐಆರ್‌ನಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಐದನೇ ಆರೋಪಿಯನ್ನಾಗಿ ಹೆಸರಿಸಲಾಗಿದ್ದು, ಗ್ಯಾಂಗ್‌ಸ್ಟರ್ ಜಗದೀಶ್ ಪದ್ಮನಾಭ ಅಲಿಯಾಸ್ ಜಗ(45)ನನ್ನು ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿದೆ.

ಬಿಕ್ಲು ಶಿವ ಕೊಲೆ ಪ್ರಕರಣದ ನಂತರ ಭೈರತಿ ಬಸವರಾಜ್‌ ಅವರು ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದರು. ಬಳಿಕ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್​​ ಗೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿತ್ತು. ನಂತದ ಸುಪ್ರೀಂಕೋರ್ಟ್​​​ ನಲ್ಲೂ ಸಹ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಇದರ ಬೆನ್ನಲ್ಲೇ ಬೈರತಿ ಬಸವರಾಜ್ ಫೆಬ್ರವರಿ 13ರಂದು ಬೆಂಗಳೂರಿಗೆ ವಾಪಸ್ಸಾಗುತ್ತಿದ್ದ ವೇಳೆ ವಿಮಾನ ನಿಲ್ದಾಣದಲ್ಲೇ ಸಿಐಡಿ ಅಧಿಕಾರಿಗಳು ಅವರನ್ನು ಬಂಧಿಸಿದ್ದರು.

Leave a Reply

Your email address will not be published. Required fields are marked *